ನನ್ನ ಉತ್ಸಾಹದ ನಡಿಗೆಗೆ ಇನ್ನಷ್ಟು ಚೈತನ್ಯ

Advertisement

ಮೈಸೂರು: ಸಾಹಿತಿ ಎಸ್.ಎಲ್ ಭೈರಪ್ಪ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಮೈಸೂರಿನ ಕುವೆಂಪು ನಗರದಲ್ಲಿರುವ ಸಾಹಿತಿ ಎಸ್ ಎಲ್ ಭೈರಪ್ಪ ನಿವಾಸಕ್ಕೆ ಬಿ ವೈ ವಿಜಯೇಂದ್ರ ಭೇಟಿ ನೀಡಿದ್ದು ಆಶೀರ್ವಾದ ಪಡದರು. ರಾಜ್ಯಾಧ್ಯಕ್ಷರಾದ ನಂತರ ಮೈಸೂರಿಗೆ ಮೊದಲ ಬಾರಿ ಬಿ.ವೈ. ವಿಜಯೇಂದ್ರ ಆಗಮಿಸಿದ್ದು ಗಣ್ಯರು, ಸಾಹಿತಿಗಳ ಭೇಟಿ ಮಾಡುತ್ತಿದ್ದಾರೆ. ಸಾಹಿತಿ ಎಸ್ ಎಲ್ ಭೈರಪ್ಪ ನಿವಾಸಕ್ಕೆ ಬಿ ವೈ ವಿಜಯೇಂದ್ರ ಭೇಟಿಯ ನಂತರ ಕನ್ನಡ ಸಾಹಿತ್ಯಕ್ಕೆ ವಿಶ್ವಮಾನ್ಯತೆ ತಂದು ಕೊಡುವ ಮೂಲಕ ರಾಷ್ಟ್ರ ಹಿತಾಸಕ್ತಿಯ ವಿಚಾರಗಳಿಗೆ ತಮ್ಮನ್ನು ಸಮರ್ಪಿಸಿಕೊಂಡ ನಾಡಿನ ಮಹಾನ್ ಚೇತನ, ಸರಸ್ವತಿ ಸಮ್ಮಾನ್ ಹಾಗೂ ಪದ್ಮ ಪ್ರಶಸ್ತಿ ಪುರಸ್ಕೃತ ಡಾ.ಎಸ್. ಎಲ್. ಭೈರಪ್ಪ ನವರನ್ನು ಇಂದು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು. ದೇಶದ ಸುಭದ್ರತೆ ಹಾಗೂ ಬಲಿಷ್ಠತೆಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಸದಾ ಪ್ರತಿಪಾದಿಸುವ ಭೈರಪ್ಪನವರ ಮಾರ್ಗದರ್ಶನದ ಹಾಗೂ ಪ್ರೇರಣೆಯ ಇಂದಿನ ಅವರ ಮಾತುಗಳು ಪಕ್ಷ ಕಟ್ಟುವಲ್ಲಿನ ನನ್ನ ಉತ್ಸಾಹದ ನಡಿಗೆಗೆ ಇನ್ನಷ್ಟು ಚೈತನ್ಯ ತುಂಬಿತು ಎಂದಿದ್ದಾರೆ. ನಂತರ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯಾದ್ಯಂತ ಪಕ್ಷ ಸಂಘಟನೆ ನನ್ನ ಮೊದಲ ಆದ್ಯತೆ. ಮುಂದಿನ ಲೋಕಸಭಾ ಚುನಾವಣೆ ಗಂಭೀರವಾಗಿ ತೆಗೆದುಕೊಂಡು 28ಕ್ಕೆ 28 ಕ್ಷೇತ್ರವನ್ನು ಗೆದ್ದು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು. ಮುಂದಿನ ಲೋಕಸಭಾ ಚುನಾವಣೆ ಹಾಗೂ ಮುಂದಿನ ಎಲ್ಲಾ ಚುನಾವಣೆ ಒಗ್ಗಟ್ಟಾಗಿ ಒಂದಾಗಿ ಎದುರಿಸುತ್ತೇವೆ. ರಾಜ್ಯ ಸರ್ಕಾರದ ವಿರುದ್ಧ ಬೇಸರಕ್ಕೆ ಪರ್ಯಾಯ ಬಿಜೆಪಿ. ಇದನ್ನು ಜನರಿಗೆ ಮನವರಿಕೆ ಮಾಡಿಕೊಡುತ್ತೇವೆ, ಬಿಜೆಪಿಗೆ ಕರ್ನಾಟಕ ದಕ್ಷಿಣ ಭಾರತದ ಭದ್ರಕೋಟೆ ಎಂದು ಹೇಳಿದರು.