ನಮ್ಮ ಕುಟುಂಬದವರ ಫೋನ್‌ ಕದ್ದಾಲಿಕೆ ನಡೆಯುತ್ತಿದೆ

Advertisement

ಬೆಂಗಳೂರು: ರಾಜ್ಯ ಸರ್ಕಾರದಿಂದ ನನ್ನ ಮತ್ತು ನನ್ನ ಕುಟುಂಬದ ಎಲ್ಲ ಸದಸ್ಯರ ಮೊಬೈಲ್ ಫೋನ್‌ಗಳನ್ನು ಕದ್ದಾಲಿಸಲಾಗುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಫೋನ್ ಜತೆಗೆ ನನ್ನ ಸುತ್ತ ಇರುವ 45 ಜನರ ಮೊಬೈಲ್ ಫೋನ್ ಕದ್ದಾಲಿಸಲಾಗುತ್ತಿದೆ. ನಾನು ಏನು ಮಾತನಾಡುತ್ತೇನೆ ಎಂಬುದೆಲ್ಲ ಡಿಸಿಎಂ ಶಿವಕುಮಾರ್‌ಗೆ ಗೊತ್ತಿದೆ. ನನ್ನ ಕುಟುಂಬದ ಎಲ್ಲ ಸದಸ್ಯರ ಫೋನ್ ಟ್ಯಾಪ್ ಮಾಡಿದ್ದಾರೆ. ಯಾರೋ ಮಾಡಿದ ತಪ್ಪಿಗೆ ಕುಟುಂಬ ಸರ್ವನಾಶ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.