ನಮ್ಮ ಕ್ಲಿನಿಕ್ ಒಂದು ಕ್ರಾಂತಿಕಾರಿ ಹೆಜ್ಜೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Advertisement

ಬೆಂಗಳೂರು: ನಮ್ಮ ಕ್ಲಿನಿಕ್ ಒಂದು ಕ್ರಾಂತಿಕಾರಿ ಹೆಜ್ಜೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮಹಾಲಕ್ಷ್ಮೀ ಲೇಔಟ್ ನ ರಾಣಿ ಅಬ್ಬಕ್ಕದೇವಿ ಆಟದ ಮೈದಾನದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 108 ನಮ್ಮ ಕ್ಲಿನಿಕ್‍ಗಳ ಲೋಕಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಶಿಕ್ಷಣಕ್ಕೆ ಅತಿ ಹೆಚ್ಚಿನ ಮಹತ್ವ ನೀಡಲಾಗಿದೆ. ರಸ್ತೆಗಳ ನಿರ್ಮಾಣವಾಗಿದೆ. ಬಹಳಷ್ಟು ಅಭಿವೃದಿಯಾಗುತ್ತಿರುವುದನ್ನು ಬಿಂಬಿಸುವ ಮೂಲಕ ಬೆಂಗಳೂರು ಬ್ರಾಂಡ್ ನ್ನು ಹೆಚ್ಚಿಸುವ ಕೆಲಸ ಮಾಡಬೇಕೆಂದು ಕರೆ ನೀಡಿದ ಮುಖ್ಯಮಂತ್ರಿಗಳು, ಮೊದಲೆಲ್ಲಾ ಕೇವಲ ಸಮಾಲೋಚನೆ ನೀಡುವ ವೈದ್ಯರಿದ್ದರು. ಈಗ ಪ್ರಾಥಮಿಕ ಚಿಕಿತ್ಸೆ ಪಡೆದು ಗುಣಮುಖರಾಗುವ ಅವಕಾಶ ದೊರೆಯುತ್ತದೆ ಎಂದರು.

ಟೆಲಿಮೆಡಸಿನ್ ವ್ಯವಸ್ಥೆ
ಇತ್ತೀಚಿನ ವರ್ಷಗಳಲ್ಲಿ ಆರೋಗ್ಯ ಸೇವೆಗಳಿಂದ ವಂಚಿತರಾದ ಜನಕ್ಕೆ ಈ ವ್ಯವಸ್ಥೆ ಪುನ: ಪ್ರಾರಂಭಿಸಲು ಖಾಸಗಿ ವಲಯದ ದವಾಖಾನೆಗಳನ್ನು ಸರ್ಕಾರವೇ ಕೈಗೆತ್ತಿಕೊಂಡು ಪ್ರಥಮ ಹಂತದಲ್ಲಿ 438 ಹಾಗೂ 108 ಬಿಬಿಎಂಪಿ ವ್ಯಾಪ್ತಿಯಲ್ಲಿ ನಮ್ಮ ಕ್ಲಿನಿಕ್ ಸ್ಥಾಪಿಸಲಾಗಿದೆ. ಸಾಮಾನ್ಯವಾಗಿರುವ ನೆಗಡಿ, ಕೆಮ್ಮಿನ ಜೊತೆಗೆ ಬಿಪಿ, ಮಧುಮೇಹ ಮುಂತಾದ ಕಾಯಿಲೆಗಳ ತೊಆಸಣೆ ಹಾಗೂ ಪರೀಕ್ಷೆಯೂ ಆಗುತ್ತದೆ. ಔಷಧಿಯನ್ನೂ ಉಚಿತವಾಗಿ ನೀಡಲಾಗುತ್ತದೆ. ಟೆಲಿಮೆಡಸಿನ್ ವ್ಯವಸ್ಥೆಯೂ ಇದ್ದು, ಹೆಚ್ಚಿನ ಸಮಸ್ಯೆ ಇದ್ದರೆ, ಪರಿಣಿತರ ಜೊತೆಗೆ ಟೆಲಿಸಂವಾದ ಮಾಡಿ ಅಗತ್ಯ ಉಪಚಾರಗಳನ್ನು ನೀಡಲಾಗುವುದು. ಇದು ಸಾಮಾನ್ಯ ನಾಗರಿಕರ ಆರೋಗ್ಯ ಸೇವೆಯನ್ನು ಇನ್ನಷ್ಟು ಗಟ್ಟಿಗೊಳಿದೆ. ಕಳೆದ ಬಾರಿ ಬಜೆಟ್ ನಲ್ಲಿ ಹೇಳಿದ್ದು, ಈಗ ಸ್ಥಾಪನೆಯಾಗಿದೆ ಎಂದರು.

ಸೂಕ್ಮಾತಿ ಸೂಕ್ಮ ಸರ್ಕಾರ
ಆರೋಗ್ಯ ಇಲಾಖೆಯಲ್ಲಿ ಕಳೆದ ವರ್ಷವೇ ಬಹಳಷ್ಟು ಕಾರ್ಯಕ್ರಮಗಳಾಗಿವೆ. ನಮ್ಮದು ಸೂಕ್ಮಾತಿಸೂಕ್ಮ ಇರುವ ಸರ್ಕಾರ. ಡಯಾಲಿಸ್ ಸೈಕಲ್ ದಿನಕ್ಕೆ 30 ಸಾವಿರ ಇದ್ದುದನ್ನು 60 ಸಾವಿರಕ್ಕೆ ಏರಿಸಲಾಗಿದೆ.ಕೀಮೋಥೆರಪಿಯ ಸೈಕಲ್ ಗಳನ್ನು 30 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಿಸಿ 12 ಹೊಸ ಕೇಂದ್ರಗಳನ್ನು ತೆರೆಯಲಾಗಿದೆ. ಹುಟ್ಟು ಕಿವುಡಿರಗೆ ಸುಮಾರು 500 ಕೋಟಿ ರೂ.ಗಳ ವೆಚ್ಚದಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಅಳವಡಿಸಲಾಗುತ್ತಿದೆ. 60 ವರ್ಷಕ್ಕೆ ಮೇಲ್ಪಟ್ಟವರ ಕಣ್ಣುಗಳ ತಪಾಸಣೆ ಮಾಡಿ ಕನ್ನಡಕ ನೀಡುವ ಯೋಜನೆ ಅನುಷ್ಠನಗೊಳಿಸಿದೆ. ಆಸ್ಯಿಡ್ ದಾಳಿಗೊಳಗಾದವರಿಗೆ ಸಹಾಯಧನವನ್ನು ಮೂರರಿಂದ ಹತ್ತು ಸಾವಿರಕ್ಕೆ ಹೆಚ್ಚಳ, ಮಾನಸಿಕ ರೋಗವಿದ್ದವರಿಗೆ ಇಡೀ ರಾಜ್ಯದಲ್ಲಿ ನಿಮ್ಹಾನ್ಸ್ ಮೂಲಕ ವಿಶೇಷ ಚಿಕಿತ್ಸೆಗೆ ಕ್ರಮ, ನಮ್ಮ ಕ್ಲಿನಿಕ್, ನೂರು ಪಿ.ಹೆಚ್‍ಸಿ ಕೇಂದ್ರಗಳನ್ನು ಸಿಹೆಚ್‍ಸಿ ಕೇಂದ್ರಗಳನ್ನಾಗಿ ಉನ್ನತೀಕರಣ, ಅಂಗಾಂಗ ಕಸಿಗಾಗಿಯೂ ಒತ್ತು ನಿಡಲಾಗಿದೆ. ಮಹಿಳೆಯರಿಗಾಗಿ ಆಯುಷ್ಮತಿ ವಿಶೇಷ ಕ್ಲಿನಿಕ್ ಸ್ತಾಪಿಸಲಾಗಿದೆ. ಆರೋಗ್ಯದ ಯಾವುದೇ ಕ್ಷೇತ್ರವನ್ನೂ ಬಿಡದೆ ಅಭಿವೃದ್ಧಿಗೊಳಿಸಲಾಗಿದೆ. ಸೂಕ್ಷ್ಮ ವಿಚಾರಗಳಿಗೆ ಕೂಡಲೇ ಸ್ಪಂದಿಸುವ ಕೆಲಸ, ದೀರ್ಘವಾಗಿ ಆರೋಗ್ಯ ಸುಧಾರಣೆಯ ದೃಷ್ಟಿಯಿಂದ ಕೆಲಸ ಮಾಡಲಾಗುತ್ತಿದೆ ಎಂದರು.