ನವೆಂಬರ್‌ ನಂತರ ಜಾತಿಗಣತಿ ವರದಿ ಪರಿಶೀಲಿಸಿ ತೀರ್ಮಾನ

Advertisement

ಮೈಸೂರು: ನವೆಂಬರ್‌ನಲ್ಲಿ ಕರ್ನಾಟಕದ ಜಾತಿಗಣತಿ ವರದಿ ನನ್ನ ಕೈ ಸೇರಬಹುದು. ಆ ನಂತರ ಪರಿಶೀಲಿಸಿ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಮೈಸೂರಿನ ಮಂಡಕಳ್ಳಿ ಏರ್​ಪೋರ್ಟ್​ನಲ್ಲಿ ಮಾತನಾಡಿದ ಅವರು, ಜಾತಿ ಗಣತಿ ವರದಿ ಲಭ್ಯವಾದ ಬಳಿಕ ಪರಿಶೀಲಿಸಿ ತೀರ್ಮಾನ ಮಾಡಲಾಗುವುದು. ಸಮಿತಿ ಅಧ್ಯಕ್ಷರು ಬದಲಾಗಿದ್ದಾರೆ. ಕಾಂತರಾಜು ಅಧ್ಯಕ್ಷರಾಗಿದ್ದಾಗ ಕುಮಾರಸ್ವಾಮಿ ವರದಿ ನೀಡಿದ್ದರು. ಆದರೆ ಕುಮಾರಸ್ವಾಮಿ ಜಾತಿ ಗಣತಿ ವರದಿ ಸ್ವೀಕರಿಸಲಿಲ್ಲ ಎಂದರು. ನವೆಂಬರ್‌ನಲ್ಲಿ ಕರ್ನಾಟಕದ ಜಾತಿಗಣತಿ ವರದಿ ನನ್ನ ಕೈ ಸೇರಬಹುದು. ಆ ನಂತರ ಪರಿಶೀಲಿಸಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ. ಸಮಿತಿಯ ಅಧ್ಯಕ್ಷರು ಬದಲಾಗಿದ್ದಾರೆ. ಹೀಗಾಗಿ ನವೆಂಬರ್‌ನಲ್ಲಿ ವರದಿ ಕೊಡುತ್ತಾರೆ ಎಂದಿರುವ ಸಿಎಂ, ಜಾತಿಗಣತಿ ಸಮಾಜವನ್ನು ವಿಂಗಡಿಸುವುದಿಲ್ಲ. ಯಾವ ಸಮುದಾಯ ಎಷ್ಟಿದೆ ಎಂಬುದು ಅಂಕಿ ಅಂಶಗಳು ಸರ್ಕಾರಕ್ಕೆ ಬೇಕು. ಸರ್ಕಾರದ ಯೋಜನೆಗಳನ್ನು ಸಿದ್ಧಪಡಿಸಲು ಜನಗಣತಿ ಅವಶ್ಯ ಎಂದು ಹೇಳಿದರು.