ನಾಗರಿಕರ ಸುರಕ್ಷತೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ ಸರ್ಕಾರ

ನಳಿನ್‌ಕುಮಾರ್ ಕಟೀಲ್
Advertisement

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ನಾಗರಿಕರ ಸುರಕ್ಷತೆಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಹಾವೇರಿ ಪ್ರಕರಣ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು “ಹಾವೇರಿಯಲ್ಲಿ ಮುಸ್ಲಿಂ ಮಹಿಳೆಯ ಮೇಲೆ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯದ ವರದಿ ಆತಂಕ ಮೂಡಿಸಿದೆ.
ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿ. ಇದು ರಾಜ್ಯದಲ್ಲಿ ಕುಸಿಯುತ್ತಿರುವ ಕಾನೂನು ಸುವ್ಯವಸ್ಥೆಯನ್ನು ತೋರುತ್ತಿದೆ. ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ನಾಗರಿಕರ ಸುರಕ್ಷತೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದು, ಕ್ರಿಮಿನಲ್‌ಗಳಿಗೆ ಪೋಲೀಸರ ಭಯವಿಲ್ಲದೆ ಅಪರಾಧ ಕೃತ್ಯ ಹೆಚ್ಚಾಗುತ್ತಿದೆ. ಈ ಕೂಡಲೇ ಆ 7 ಮಂದಿ ದುರುಳರನ್ನು ಕಾನೂನಿನಡಿ ಅತ್ಯಂತ ಕಠಿಣ ಶಿಕ್ಷೆಗೆ ಒಳಪಡಿಸಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸಬೇಕು ಎಂದಿದ್ದಾರೆ.