ನಿಯಮ ಗಾಳಿಗೆ ತೂರಿ ಟೆಂಡರ್ ಪ್ರಕ್ರಿಯೆ

ಟೆಂಡರ್
Advertisement

ಶ್ರೀಕಾಂತ ಸರಗಣಾಚಾರಿ
ಕುಷ್ಟಗಿ: ಜೆಸ್ಕಾಂ ಇಲಾಖೆ ಪಕ್ಕದಲ್ಲಿ ಇರುವಂತಹ ಪುರಸಭೆಗೆ ಸೇರಿದ 16 ವಾಣಿಜ್ಯ ಮಳಿಗೆಗಳ ಟೆಂಡರ್ ಪ್ರಕ್ರಿಯೆ ಸೆ. 5ರಂದು ನಡೆಸಲಾಗಿತ್ತು. ಈ ಟೆಂಡರ್ ನಡೆಸುವ ಸಂದರ್ಭದಲ್ಲಿ ಟೆಂಡರ್ ನಿಯಮಗಳು ಉಲ್ಲಂಘನೆಯಾಗಿರುವ ಹಿನ್ನೆಲೆಯಲ್ಲಿ ಯೋಜನಾ ನಿರ್ದೇಶಕರು ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸಲ್ಲಿಸಿದ ವರದಿ ಅನ್ವಯ ಈಗಾಗಲೇ ನಡೆಸಲಾಗಿದ್ದ ಟೆಂಡರನ್ನು ಜಿಲ್ಲಾಧಿಕಾರಿ ಸುಂದರೇಶ್ ಬಾಬು ರದ್ದುಪಡಿಸಿ ಆದೇಶಿಸಿದ್ದಾರೆ.
ಸೆ. 5ರಂದು ನಡೆದ ಟೆಂಡರ್ ಪ್ರಕ್ರಿಯೆಯಲ್ಲಿ ಪುರಸಭೆ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿ ಟೆಂಡರ್ ಪ್ರಕ್ರಿಯೆ ಮಾಡಿದ್ದರು ಪುರಸಭೆಯ ಕಾಂಗ್ರೆಸ್ ಪಕ್ಷದ ಸದಸ್ಯರು ಹಾಗೂ ಭಗತ್ ಸಿಂಗ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ವಜೀರಅಲಿ ಬಿ ಗೋನಾಳ ಸೇರಿದಂತೆ ಸಾರ್ವಜನಿಕರು ಪುರಸಭೆಗೆ ಸೇರಿದ 16 ವಾಣಿಜ್ಯ ಮಳಿಗೆಗಳ ಟೆಂಡರ್ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಈಗ ಟೆಂಡರ್ ಪ್ರಕ್ರಿಯೆಯನ್ನು ರದ್ದುಪಡಿಸಬೇಕೆಂದು. ಜಿಲ್ಲಾಧಿಕಾರಿಗಳಿಗೆ,
ಜಿಲ್ಲಾ ಯೋಜನಾ ನಿರ್ದೇಶಕರು ನಗರಾಭಿವೃದ್ಧಿ ಕೋಶಾಗೆ ದೂರು ಸಲ್ಲಿಸಿದ್ದರು.
ಸೆ. 16ರಂದು ಯೋಜನಾ ನಿರ್ದೇಶಕರ ಭೇಟಿ:
ವಾಣಿಜ್ಯ ಮಳಿಗೆಗಳ ಟೆಂಡರ್ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ದೂರು ದೂರಿನ ಅರ್ಜಿ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕಾವ್ಯ ರಾಣಿ ವಾಣಿಜ್ಯ ಮಳಿಗೆಗಳಿಗೆ ಭೇಟಿ ನೀಡಿ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡು ಟೆಂಡರ್ ಪ್ರಕ್ರಿಯೆಯಲ್ಲಿ ಯಾವ ರೀತಿ ಮಾಡಲಾಗಿದೆ ಎಂಬುದರ ಕುರಿತು ವರದಿ ಸಿದ್ಧಪಡಿಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿದ್ದರು. ವರದಿಯಲ್ಲಿ ನಿಯಮ ಉಲ್ಲಂಘನೆ ಆಗಿರುವುದರಿಂದ ಜಿಲ್ಲಾಧಿಕಾರಿಗಳು ಈಗಾಗಲೇ ಮಾಡಲಾಗಿರುವ ಟೆಂಡರ್ ಪ್ರಕ್ರಿಯೆಯನ್ನು ರದ್ದುಗೊಳಿಸಿದ್ದಾರೆಂದು ಅಧಿಕಾರಿಗಳು ಖಚಿತ ಮಾಹಿತಿ ನೀಡಿದ್ದಾರೆ.