ಚಿಕ್ಕಬಳ್ಳಾಪುರ: ಕರ್ನಾಟಕದ ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ನಾಯಕ ಎಂ. ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದರು. ಆದರೆ, ಹೈಕಮಾಂಡ್ ಸ್ಪರ್ಧೆಯಿಂದ ಹಿಂದೆ ಸರಿಯಲು ಮಾನವಿ ಮಾಡಿತ್ತು. ಹೀಗಾಗಿ ಹೈಕಮಾಂಡ್ಗೆ ಗೌರವ ಕೊಟ್ಟು ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂದರು. ಅಲ್ಲದೇ ರಕ್ಷಾ ರಾಮಯ್ಯಗೆ ಅವರಿಗೆ ಬೆಂಬಲ ನೀಡುತ್ತೇನೆ ಎಂದು ಅವರು ಘೋಷಿಸಿದರು.