ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರ ನೇಮಕಾತಿಗೆ ವ್ಯವಸ್ಥೆ: ಸಿಎಂ

ಬೊಮ್ಮಾಯಿ
Advertisement

ಬೆಂಗಳೂರು: ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು ನೇಮಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಾಜಿ ರಾಷ್ಟ್ರಪತಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ 25 ಸಾವಿರ ಕೋಟಿ ರೂ. ಅನುದಾನ ಬಜೆಟ್‌ನಲ್ಲಿ ನೀಡಲಾಗಿದೆ. 19 ಸಾವಿರ ಕೋಟಿ ರೂ. ಶಿಕ್ಷಕರ ಸಂಬಳ, 5,000 ಕೋಟಿ ರೂ. ಶಾಲೆಗಳ ಅಭಿವೃದ್ಧಿಗಾಗಿ ನೀಡಲಾಗಿದೆ. ಒಂದೇ ವರ್ಷದಲ್ಲಿ 8,101 ಶಾಲಾ ಕೊಠಡಿಗಳನ್ನು ನಿರ್ಮಿಸುವ ರಾಜ್ಯದ ಇತಿಹಾಸದಲ್ಲೇ ಮೊದಲು. 23 ಸಾವಿರ ಶಾಲಾ ಕೊಠಡಿಗಳನ್ನು ಪುನಃ ನಿರ್ಮಿಸಬೇಕಾಗಿದ್ದು, ಪ್ರಥಮ ಹಂತದಲ್ಲಿ 8,101 ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದರು.