ನೀಟ್‌ ಮರು ಪರೀಕ್ಷೆ

Advertisement

ನವದೆಹಲಿ: ನೀಟ್‌-2024 ರದ್ದತಿ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಇಂದು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿದೆ.
ನೀಟ್​ ಯುಜಿ ಪರೀಕ್ಷೆಯಲ್ಲಿ ಕೃಪಾಂಕ ಪಡೆದಿರುವ 1,563 ಅಭ್ಯರ್ಥಿಗಳಿಗೆ ಜೂನ್​ 23ರಂದು ಮರು ಪರೀಕ್ಷೆ ನಡೆಸುವುದಾಗಿ ಕೇಂದ್ರ ಸರ್ಕಾರ ಮತ್ತು ಎನ್​ಟಿಎ ಸುಪ್ರೀಂ ಕೋರ್ಟ್​ಗೆ ತಿಳಿಸಿದೆ.
ಪರೀಕ್ಷೆಗಳನ್ನು ಜೂನ್ 23 ರಂದು ನಡೆಸಲಾಗುವುದು ಮತ್ತು ಜೂನ್ 30 ರೊಳಗೆ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಎನ್​​ಟಿಎ ಸುಪ್ರೀಂ ಕೋರ್ಟ್​​ಗೆ ತಿಳಿಸಿದೆ.
ನೀಟ್-ಯುಜಿ ಪರೀಕ್ಷೆಗೆ ಹಾಜರಾಗುವಾಗ ಅನುಭವಿಸಿದ ಸಮಯದ ನಷ್ಟವನ್ನು ಸರಿದೂಗಿಸಲು ‘ಗ್ರೇಸ್ ಅಂಕ’ ಪಡೆದ 1,563 ಕ್ಕೂ ಹೆಚ್ಚು ಅಭ್ಯರ್ಥಿಗಳ ಫಲಿತಾಂಶಗಳನ್ನು ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.