ನೀತಿಸಂಹಿತೆ ಜಾರಿ ಬೆನ್ನಲ್ಲೇ ಮೊದಲ ಪಟ್ಟಿ: ಜಗದೀಶ ಶೆಟ್ಟರ್

ಶೆಟ್ಟರ್‌
Advertisement

ಹುಬ್ಬಳ್ಳಿ: ಚುನಾವಣೆ ಘೋಷಣೆಗೂ ಮುನ್ನ ಬಿಜೆಪಿಯಲ್ಲಿ ಟಿಕೆಟ್ ಘೋಷಣೆ ಮಾಡುವುದಿಲ್ಲ. ನೀತಿ ಸಂಹಿತೆ ಜಾರಿಯಾದ ನಂತರ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ತಿಳಿಸಿದ್ದಾರೆ.
ಮಂಗಳವಾರ ಪತ್ರಕರ್ತರ ಜೊತೆಗೆ ಮಾತನಾಡುತ್ತ, ಕೆಲ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ವಿಚಾರಕ್ಕೆ ಪ್ರತಿಕ್ರಯಿಸಿ ಈ ಬಾರಿಯ ವಿದಾನಸಭೆ ಚುನವಣೆಯಲ್ಲಿ ಹಾಲಿ ಶಾಸಕರ ಟಿಕೆಟ್ ನೀಡುವುದಿಲ್ಲ ಎನ್ನುವ ವದಂತಿ ಸಾಕಷ್ಟು ಗೊಂದಲ ಮೂಡಿಸಿದೆ. ವಯಸ್ಸು, ಸೋಲು-ಗೆಲುವಿನ ಸಮೀಕರಣದ ಇತ್ಯಾದಿ ಕಾರಣಗಳಿಂದಾಗಿ ಕೆಲ ಹಾಲಿ ಶಾಸಕರಿಗೆ ಟಿಕೇಟ್ ತಪ್ಪಬಹುದೇ ವಿನಃ ಬಹುತೇಕರಿಗೆ ಟಿಕೆಟ್ ಫಿಕ್ಸ್ ಎಂದು ಅಭಿಪ್ರಾಯಪಟ್ಟರು.
ಇನ್ನು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದ ಮೇಲೆ ಕಲ್ಲು ತೂರಾಟ ವಿಚಾರವಾಗಿ ಮಾತನಾಡಿದ ಶೆಟ್ಟರ್, ಒಳ ಮೀಸಲಾತಿ ಬಹು ವರ್ಷಗಳ ಬೇಡಿಕೆಯಾಗಿತ್ತು. ಹೀಗಾಗಿ ಅದರ ಸಾಧಕ ಮತ್ತು ಬಾಧಕದ ಬಗ್ಗೆ ತಿಳಿಯಲು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಚಿವ ಸಂಪುಟ ಉಪ ಸಮಿತಿನ್ನು ರಚಿಸಲಾಗಿತ್ತು. ಒಳ ಮೀಸಲಾತಿ ಕುರಿತ ಇರುವ ಹಲವು ಗೊಂದಲದಿAದಾಗಿ ಈ ಘಟನೆ ಸಂಭವಿಸಿದೆ. ಆದರೆ, ಕಾಂಗ್ರೆಸ್ ಇದರಲ್ಲಿಯೂ ರಾಜಕಾರಣ ಮಾಡಲು ಹೊರಟಿದೆ ಎಂದು ಬೇಸರ ವ್ಯಕ್ತಪಡಿಸಿದರು.
ರಾಹುಲ್ ಗಾಂಧಿ ಕೋಲಾರ ಭೇಟಿ ವಿಚಾರವಾಗಿ ಮಾತನಾಡಿ, ರಾಹುಲ್ ಗಾಂಧಿ ಪ್ರವಾಸ ಕಾಂಗ್ರೆಸ್ ಅವಸಾನಕ್ಕೆ ಹಾದಿ. ರಾಹುಲ್ ಗಾಂಧಿ ಎಲ್ಲೆಲ್ಲಿ ಪ್ರವಾಸ ಮಾಡಿದ್ದಾರೊ ಅಲ್ಲೆಲ್ಲ ಕಾಂಗ್ರೆಸ್‌ಗೆ ಡ್ಯಾಮೇಜ್ ಆಗಿದೆಯೇ ವಿನಃ ಬಿಜೆಪಿಗೆ ಹಿನ್ನಡೆ ಆಗಿಲ್ಲ ಎಂದು ವ್ಯಂಗ್ಯವಾಡಿದರು.