ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ
Advertisement

ಮಂಗಳೂರು: ನೈತಿಕ ಪೊಲೀಸ್ ಗಿರಿ ಮಾಡಲು‌ ಕಾನೂನಿನಲ್ಲಿ ಅವಕಾಶವಿಲ್ಲ. ಮುಖ್ಯಮಂತ್ರಿಗಳಿಗೆ ಕಾನೂನು ಗೊತ್ತಿದೆಯಾ ಇಲ್ವಾ ಅಂತಾ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಕಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಇದನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದ್ದಾರೆ. ಕ್ರಿಯೆಗೆ ಪ್ರತಿಕ್ರಿಯೆ ಎಂಬ ಹೇಳಿಕೆಯನ್ನ ಸಿಎಂ ನೀಡಿದ್ರೆ ಏನರ್ಥ? ಕೊಲೆ‌ ಮಾಡಿದ್ರೆ ಇನ್ನೊಬ್ಬರ ಕೊಲೆ‌ ಮಾಡಬೇಕು ಎಂದು ಇದೆಯಾ? ಎಂದು ಪ್ರಶ್ನಿಸಿದರು.
ಸಿಎಂ ಆಗಿ ಈ ರೀತಿಯ ಹೇಳಿಕೆ ನೀಡಬಾರದು. ಏಳೆಂಟು ಈ ರೀತಿಯ ಪ್ರಕರಣ ನಡೆದಿದೆ. ಇದನ್ನು ನಾನು ಖಂಡಿಸುತ್ತೇನೆ. ಕಠಿಣವಾದ ಕ್ರಮ ಕೈಗೊಳ್ಳಬೇಕು. ಭಾರತೀಯ ದಂಡ ಸಂಹಿತೆಯಲ್ಲಿ ಅವಕಾಶ ಇದೆಯಾ? ಪೊಲೀಸರು ಮತ್ತೆ ಯಾಕೆ ಇರೋದು.? ಯಾರು ತಪ್ಪು ಮಾಡ್ತಾರೆ ಅವರ ಮೇಲೆ ಕ್ರಮ ತೆಗೆದುಕೊಳ್ಳೋಕೆ ಇರೋರು. ಅನಗತ್ಯವಾಗಿ ಕಾನೂನು ಸುವ್ಯವಸ್ಥೆಯಲ್ಲಿ ಭಾಗಿಯಾಗೋದನ್ನು ಖಂಡಿಸುತ್ತೇನೆ. ಸರ್ಕಾರ ಇದಕ್ಕೆ ಅವಕಾಶ ಕೊಡಬಾರದು ಎಂದು ಸಿದ್ದರಾಮಯ್ಯ ಹೇಳಿದರು.