ಪಂಚಮಸಾಲಿ ಮೀಸಲಾತಿಗಾಗಿ ಸಿಎಂ ನಿವಾಸದ ಎದುರು ಪ್ರತಿಭಟನೆ

ಪಂಚಮಸಾಲಿ
Advertisement

ಶಿಗ್ಗಾಂವಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಎದುರು ಪಂಚಮಸಾಲಿ ಸಮಾಜದ ವತಿಯಿಂದ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದಲ್ಲಿರುವ ಕಿತ್ತೂರರಾಣಿ ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಸಿರು ಟವೆಲ್ ಬೀಸಿ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ಕಿತ್ತೂರರಾಣಿ ಚೆನ್ನಮ್ಮ ವೃತ್ತದಿಂದ ಸಿಎಂ ನಿವಾಸದವರೆಗೂ ಪ್ರತಿಭಟನಾ ಮೆರವಣಿಗೆ ಸಾಗಿತು.
ಪ್ರತಿಭಟನಾ ಧರಣಿಯಲ್ಲಿ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಮೀಸಲಾತಿಗಾಗಿ ನಡೆಸುತ್ತಿರುವ ಪಂಚಮಸಾಲಿ ಹೋರಾಟ ಯಶಸ್ಸು ಕಂಡಿದೆ. ಶೇ. 2ರಷ್ಟಿರುವ ಲಿಂಗಾಯತ ಜನರೇ ನಮ್ಮನ್ನು ಆಳಿದರು. ಬಿ.ಎಸ್. ಯಡಿಯೂರಪ್ಪ ಲಿಂಗಾಯತ ನಾಯಕ ಎಂದು ತಿಳಿದಿದ್ದೆವು. ಅಷ್ಟು ದೊಡ್ಡ ಕಠಿಣ ಪಾದಯಾತ್ರೆ ಮಾಡಿದೆವು. ಯಡಿಯೂರಪ್ಪನವರು ಮೀಸಲಾತಿ ಕೊಡಲೇ ಇಲ್ಲ, 10 ಲಕ್ಷ ಜನ ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಭಾಗಿಯಾದರು. ಸಮಾಜ ಒಗ್ಗಟ್ಟಾಯಿತು. ಆದರೆ ಯಡಿಯೂರಪ್ಪನವರ ಮನಸ್ಸು ಕರಗಲಿಲ್ಲ ಎಂದು ಟೀಕಿಸಿದರು. ಸಿಎಂ ಬೊಮ್ಮಾಯಿಯವರು ಮೀಸಲಾತಿ ನೀಡಿದರೆ 101 ಲೀಟರ್ ಹಾಲಿನ ಅಭಿಷೇಕ ಮಾಡ್ತಿವಿ. ಸೂರ್ಯ-ಚಂದ್ರ ಇರೋವರೆಗೆ ಹೇಗೆ ಚೆನ್ನಮ್ಮನ ಸ್ಮರಣೆ ಮಾಡ್ತೀವೋ ಹಾಗೆ ನಿಮ್ಮ ಸ್ಮರಣೆ ಮಾಡ್ತೀವಿ. ಸವಣೂರು ಖಾರಾ ತುಲಾಭಾರ ಮಾಡಿಸ್ತೀವಿ ಎಂದರು.

ಪಂಚಮಸಾಲಿ