ಪಂಚಮಸಾಲಿ ಮೀಸಲಾತಿ: ಡಿ. 5ರಂದು ಸರ್ವಪಕ್ಷ ಶಾಸಕರ ಸಭೆ

ಬಸವಜಯ ಮೃತ್ಯುಂಜಯ ಸ್ವಾಮೀಜಿ
Advertisement

ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಬೆಳಗಾವಿಯ ಚಳಿಗಾಲದ ಅಧಿವೇಶನದ ವೇಳೆ ಸಮಾಜದ ಹಾಲಿ, ಮಾಜಿ ಶಾಸಕರ ಸಭೆ ಕರೆಯಲಾಗಿದ್ದು, ಇಲ್ಲಿ ಮುಖ್ಯಮಂತ್ರಿಗಳಿಗೂ ಆಹ್ವಾನ ನೀಡಿ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಕೂಡಲಸಂಗಮ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
ನಗರದಲ್ಲಿಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ಸಚಿವರಾದ ಲಕ್ಷ್ಮೀ ಹೆಬ್ಬಾಳಕರ, ಶಿವಾನಂದ ಪಾಟೀಲ, ವಿಜಯಾನಂದ ಕಾಶಪ್ಪನವರ, ವಿನಯ ಕುಲಕರ್ಣಿ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಅಧಿವೇಶನದ ವೇಳೆ ಸರ್ಕಾರದ ಗಮನ ಸೆಳೆಯುವ ಉದ್ದೇಶ ಹೊಂದಿದ್ದು, ಸುವರ್ಣಸೌಧದ ಎದುರು ಇಷ್ಟಲಿಂಗ ಪೂಜೆ ನೆರವೇರಿಸುವ ಮೂಲಕ ಹೋರಾಟ ನಡೆಸಲಿದ್ದೇವೆ ಎಂದರು.
ಲೋಕಸಭೆ ಚುನಾವಣೆ ಒಳಗೆ ರಾಜ್ಯ ಸರ್ಕಾರ ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದ ಅವರು, ಈ ಬಗ್ಗೆ ಬೆಂಗಳೂರು, ಬೆಳಗಾವಿ ಹಾಗೂ ಕೂಡಲಸಂಗಮದಲ್ಲಿ ಬೃಹತ್ ಸಮಾವೇಶ ನಡೆಸುವ ಬಗ್ಗೆಯೂ ತಿಳಿಸಿದರು.