ಪದ್ಮಶ್ರೀ ಪುರಸ್ಕೃತ ಉಸ್ತಾದ್‌ ರಶೀದ್‌ ಖಾನ್‌ ನಿಧನ

Advertisement

ನವದೆಹಲಿ: ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ಅವರು 55 ನೇ ವಯಸ್ಸಿನಲ್ಲಿ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಕೋಲ್ಕತ್ತಾದ ಪೀರ್ಲೆಸ್ ಆಸ್ಪತ್ರೆಯಲ್ಲಿ ಸಂಜೆ 6 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತದೆ. ಅವರ ಪಾರ್ಥಿವ ಶರೀರವನ್ನು ರಾತ್ರಿ ಕೋಲ್ಕತ್ತಾದ ಪೀಸ್ ಹೆವನ್‌ಗೆ ಕಳುಹಿಸಲಾಗುವುದು. ಅವರ ಅಂತ್ಯಕ್ರಿಯೆ ಜನವರಿ 10 ರಂದು ನಡೆಯಲಿದೆ ಎಂದು ಕುಟುಂಬ ತಿಳಿಸಿದೆ.
2022ರಲ್ಲಿ ಕೇಂದ್ರ ಸರ್ಕಾರ ಇವರಿಗೆ ದೇಶದ ಮೂರನೇ ಅತ್ಯುನ್ನತ ನಾಗರೀಕ ಪುರಸ್ಕಾರವಾದ ಪದ್ಮಭೂಷಣ ಪ್ರಶಸ್ತಿ ನೀಡಿಯೂ ಗೌರವಿಸಿತ್ತು. 1968ರ ಜುಲೈ 1 ರಂದು ಜನಿಸಿದ್ದ ಉಸ್ತಾದ್‌ ರಶೀದ್‌ ಖಾನ್‌, ಹಿಂದೂಸ್ತಾನಿ ಸಂಗೀತ ಸಂಪ್ರದಾಯದ ಶಾಸ್ತ್ರೀಯ ಸಂಗೀತಗಾರರಾಗಿದ್ದರು. ಅವರು ರಾಂಪುರ-ಸಹಸ್ವಾನ್ ಘರಾನಾಗೆ ಸೇರಿದವರು ಮತ್ತು ಘರಾನಾ ಸಂಸ್ಥಾಪಕ ಇನಾಯತ್ ಹುಸೇನ್ ಖಾನ್ ಅವರ ಮೊಮ್ಮಗ. ಭಾರತರತ್ನ ಪಂಡಿತ್‌ ಭೀಮ್‌ಸೇನ್‌ ಜೋಶಿ ಅವರೇ ಒಮ್ಮೆ, ರಶೀದ್‌ ಖಾನ್‌ ಅವರ ದನಿಯನ್ನು ಕೇಳಿ ಭಾರತೀಯ ಗಾಯನ ಸಂಗೀತದ ಭವಿಷ್ಯದ ಭರವಸೆ ಎಂದು ಹೊಗಳಿದ್ದರು.