ಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕನಾಗಿ ಅರವಿಂದ್ ಬೆಲ್ಲದ್‌ ನೇಮಕ

Advertisement

ಬೆಂಗಳೂರು: ವಿಧಾನ ಪರಿಷತ್ ಪ್ರತಿಪಕ್ಷದ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕನಾಗಿ ಅರವಿಂದ್‌ ಬೆಲ್ಲದ್‌ ಅವರನ್ನು ನೇಮಕ ಮಾಡಲಾಗಿದೆ.
ಇನ್ನು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ಬಣದ ಎನ್ ರವಿಕುಮಾರ್ ಅವರನ್ನು ವಿಧಾನಪರಿಷತ್ ಮುಖ್ಯ ಸಚೇತಕರಾಗಿ ಮತ್ತು ದೊಡ್ಡನಗೌಡ ಪಾಟೀಲ್ ವಿಧಾನಸಭೆ ಮುಖ್ಯ ಸಚೇತಕರನ್ನಾಗಿ ಆಯ್ಕೆ ಮಾಡಿದರೆ, ಸುನೀಲ್ ವಲ್ಯಾಪುರೆ ಅವರನ್ನು ವಿಧಾನ ಪರಿಷತ್ ವಿರೋಧ ಪಕ್ಷದ ಉಪನಾಯಕನಾಗಿ ಆಯ್ಕೆ ಮಾಡಲಾಗಿದೆ.
ಕೆಲವು ದಿನಗಳ ಹಿಂದಷ್ಟೇ ಬಿ.ವೈ ವಿಜಯೇಂದ್ರ ಅವರು ರಾಜ್ಯ ಬಿಜೆಪಿ ಉಪಾಧ್ಯಕ್ಷರು, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾರ್ಯದರ್ಶಿಗಳು ಮತ್ತು ಕೆಲವು ಮೋರ್ಚಾಗಳಿಗೆ ನೇಮಕಾತಿಯನ್ನು ಪ್ರಕಟಿಸಿದ್ದರು. ಇದೀಗ ಎರಡನೇ ಹಂತದಲ್ಲಿ ವಿಧಾನ ಸಭೆ ಮತ್ತು ಪರಿಷತ್‌ನ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಲಾಗಿದೆ.