ಪುತ್ತಿಲ ಸ್ಪರ್ಧೆ ಫಿಕ್ಸ್

Advertisement

ಮಂಗಳೂರು: ಪುತ್ತೂರಿನ ಅರುಣ್ ಕುಮಾರ್ ಪುತ್ತಿಲ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದು ಖಚಿತವಾಗಿದೆ.
ಈ ಬಗ್ಗೆ ಪುತ್ತೂರಿನಲ್ಲಿ ಪುತ್ತಿಲ ಪರಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಕುರಿತು ಸ್ಪಷ್ಟನೆ ನೀಡಿದ್ದಾರೆ.
ಮುಂದಿನ ಎಲ್ಲಾ ಚುನಾವಣೆಯಲ್ಲಿ ನಮ್ಮ ಸ್ಪರ್ಧೆ ಖಚಿತ. ಮುಂದಿನ ಎಲ್ಲಾ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧಿಸಲಿದೆ. ಪುತ್ತೂರು ತಾಲೂಕಿನಲ್ಲಿ ಜನರ ಸಮಸ್ಯೆಗಳಿಗೆ ಸ್ಪಂಧಿಸುವ ಸಂಘಟನೆ ಇದ್ರೆ ಅದು ಪುತ್ತಿಲ ಪರಿವಾರವಾಗಿದೆ. ಇನ್ನೂ ಮುಂದೆ ಹೆಚ್ಚು ಸೇವೆ ಸಲ್ಲಿಸುವ ಸಲುವಾಗಿ ನಮ್ಮ ಆರೋಗ್ಯ ಘಟಕದಿಂದ ಬೆಟ್ಟಂಪಾಡಿ ವಿಭಾಗದಲ್ಲಿ ಮಾ.3ಕ್ಕೆ ಆ್ಯಂಬುಲೆನ್ಸ್‌ ಸೇವೆ ಆರಂಭಿಸಲಿದ್ದೇವೆ. ಮುಂದಿನ ದಿನ ಜಿಲ್ಲೆಯಾದ್ಯಂತ ಸಂಘಟನೆ ಗಟ್ಟಿಗೊಳಿಸುವ ಕೆಲಸ ಮಾಡುತ್ತೇವೆ. ಸಂಘಟನೆಯನ್ನು ರಾಜ್ಯಕ್ಕೆ ವಿಸ್ತರಿಸಲಿದ್ದೇವೆ ಎಂದು ತಿಳಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಪರಿವಾರದ ವಕ್ತಾರ ಕೃಷ್ಣ ಉಪಾದ್ಯಾಯ, ಉಪಾದ್ಯಕ್ಷ ಮಹೇಂದ್ರ ವರ್ಮ, ನಗರ ಅಧ್ಯಕ್ಷ ಅನಿಲ್‌ ತೆಂಕಿಲ, ಕೋಡಿಬೈಲು ಉಪಸ್ಥಿತರಿದ್ದರು.