ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಗೆ ಖಂಡನೆ

Advertisement

ಕೊಪ್ಪಳ: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪಕ್ಷದ ಕಾರ್ಯಕರ್ತರು ಸಮೀಪದ ಭಾಗ್ಯನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.

ಕೊಪ್ಪಳ: ಪೆಟ್ರೋಲ್‌ಹಾಗೂ ಡಿಸೇಲ್‌ಬೆಲೆ ಏರಿಕೆ ಖಂಡಿಸಿ ಕೊಪ್ಪಳದ ಭಾಗ್ಯನಗರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್‌ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ ಸರ್ಕಾರ ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆಯನ್ನು ಏರಿಕೆ ಮಾಡುವ ಮೂಲಕ ಸಾಮಾನ್ಯ ಜನರ ಮೇಲೆ ಹೊರೆಯನ್ನು ಹೊರೆಸಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ಅಗತ್ಯ ವಸ್ತುಗಳ ಬೆಲೆ ಸೇರಿದಂತೆ ಇನ್ನಿತರೆ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿದೆ. ಈ ಮೂಲಕ ರಾಜ್ಯ ಸರ್ಕಾರ ಜನರ ಜೇಬಿಗೆ ಕತ್ತರಿ ಹಾಕಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆಯನ್ನು ಏರಿಕೆ ಮಾಡಿರುವುದರಿಂದ ಸಾರಿಗೆ ವೆಚ್ಚವೂ ಹೆಚ್ಚಾಗಲಿದೆ. ಇದರ ಪರಿಣಾಮ ಬೇರೆ ಬೇರೆ ಕ್ಷೇತ್ರಗಳ ಮೇಲೂ ಆಗಲಿದ್ದು, ದಿನಸಿ ವಸ್ತುಗಳು ಸೇರಿದಂತೆ ಇನ್ನಿತರೆ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಗೆ ಕಾರಣವಾಗಲಿದೆ. ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಯಾಗಿದ್ದು, ಇದರಿಂದ ದಿನಸಿ ಹಾಗೂ ಇನ್ನಿತರ ವಸ್ತುಗಳ ಬೆಲೆಯ ಮೇಲೂ ಪರಿಣಾಮ ಬೀರಲಿದೆ. ಈ ಮೂಲಕ ರಾಜ್ಯ ಸರ್ಕಾರವು ಜನರಿಗೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಇಳಿಸಬೇಕು. ಅಗತ್ಯ ವಸ್ತುಗಳ ಬೆಲೆ ಏರಿಸದೇ ಜನರನ್ನು ರಕ್ಷಿಸಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು.

ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಮುಖಂಡರಾದ ಡಾ.ಕೊಟ್ರೇಶ್ ಶೇಡ್ಮಿ, ಸತೀಶ್ ಮೇಘರಾಜ್, ಮಲ್ಲೇಶ್ ಬುಲ್ಟಿ, ಕೊಟ್ರೇಶ್ ಕವಲೂರು, ವೀರೇಶ್ ಗೊಂಡಬಾಳ, ಗಿರೀಶ್ ಪಾನಗಂಟಿ, ರಾಜೇಶ್ ತಟ್ಟಿ, ನೀಲಕಂಠಪ್ಪ ಮೈಲಿ, ಕಿರಣ್ ಶ್ಯಾವಿ ಇದ್ದರು.