ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಹೇಸಿಗೆ ತರಿಸುವಂಥದ್ದು : ಸಚಿವ ಜೋಶಿ ಸಿಡಿಮಿಡಿ

Advertisement

ಹುಬ್ಬಳ್ಳಿ : ಮಹಿಳೆಯರನ್ನು ಉನ್ನತ ಸ್ಥಾನದಲ್ಲಿರಿಸಿ, ಅತ್ಯಂತ ಗೌರವದಿಂದ ನೋಡುವ ಭಾರತ ದೇಶದಲ್ಲಿ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಹೇಸಿಗೆ ತರಿಸುವಂಥದ್ದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಖಂಡಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿ, ಪೆನ್ ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಇದುವರೆಗೆ ನಡೆದುಕೊಂಡ ರೀತಿ ಅಕ್ಷಮ್ಯ. ಸಂತ್ರಸ್ತರ ಕ್ಷಮೆ ಕೇಳುತ್ತಾರೋ, ಬಿಡುತ್ತಾರೋ ಆದರೆ, ಇದೊಂದು ಘನಘೋರ ಕೃತ್ಯವಾಗಿದ್ದರಿಂದ ಕಾನೂನು ರೀತಿಯಲ್ಲಿ ಶಿಕ್ಷೆಯಾಗಲೇಬೇಕು. ಇದು ಬಿಜೆಪಿಯ ಸ್ಪಷ್ಟ ನಿಲುವಾಗಿದೆ ಎಂದು ಪ್ರಲ್ಹಾದ ಜೋಶಿ ಹೇಳಿದರು.

ಭಾರತೀಯ ನ್ಯಾಯಾಂಗ ವ್ಯವಸ್ಥೆ ಬಲಿಷ್ಠವಾಗಿದೆ. ತ್ವರಿತವಾಗಿ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ಆರೋಪಿಗೆ ಶೀಘ್ರವೇ ಅತ್ಯುಗ್ರ ಶಿಕ್ಷೆ ವಿಧಿಸಬೇಕು ಎಂದು ಸಚಿವ ಜೋಶಿ ಪ್ರತಿಕ್ರಿಯಿಸಿದರು.

ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಗೆಲುವು : ಈವರೆಗಿನ ಲೋಕಸಭಾ ಚುನಾವಣೆಯಲ್ಲಿ ಎಷ್ಟು ಅಂತರದಿಂದ ಗೆಲುವು ಸಾಧಿಸಿಕೊಂಡು ಬಂದಿದ್ದೆನೆಯೋ ಈ ಬಾರಿ ಅದಕ್ಕಿಂತಲೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಜೋಶಿ ಭರವಸೆ ವ್ಯಕ್ತಪಡಿಸಿದರು.