ಪ್ರತ್ಯೇಕ ಪ್ರಕರಣ- ಮೂವರ ಆತ್ಮಹತ್ಯೆ

ಆತ್ಮಹತ್ಯೆ
Advertisement

ಮಂಗಳೂರು: ಪ್ರತ್ಯೇಕ ಪ್ರಕರಣದಲ್ಲಿ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯ ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ ಶಂಕರ ಮಾಡನ್ನೂರು (೪೮) ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ೫ ವರ್ಷಗಳ ಹಿಂದೆ ಸಾಲ ಮಾಡಿ ಜಮೀನು ಖರೀದಿ ಮಾಡಿದ್ದು, ಸಾಲ ಮರುಪಾವತಿಲು ಸಾದ್ಯವಾಗದೆ ಡಿ.೩ರಂದು ರಾತ್ರಿ ಮನೆ ಮಂದಿ ಮಲಗಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ಆನಂದ ಗೌಡ ಎಂಬವರ ಪುತ್ರ ಪ್ರೀತಂ ಗೌಡ ( ೨೬)ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಳ್ಯದ ಖಾಸಗಿ ಬ್ಯಾಂಕ್ ನಲ್ಲಿ ಮೆನೇಜರ್ ಆಗಿರುವ ಪ್ರೀತಂ ಅವರು ಡಿ.೨ರಂದು ರಾತ್ರಿ ತನ್ನ ಮನೆಯ ಮುಂಭಾಗದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಓರ್ವ ಸಹೋದರ ನನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆರ್ಯಾಪು ಗ್ರಾಮದ ಸಂಪ್ಯ ಸಮೀಪದ ಮೇರ್ಲ ಎಂಬಲ್ಲಿ ನಡೆದಿದ್ದು, ಮೃತ ದೇಹ ಇಂದು ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದೆ.
ಆರ್ಯಾಪು ಗ್ರಾಮದ ಮೇರ್ಲ ನಿವಾಸಿ ಪ್ರಕಾಶ್ ಶೆಟ್ಟಿ (೪೬) ಆತ್ಮಹತ್ಯೆ ಮಾಡಿಕೊಂಡವರು. ಪ್ರಕಾಶ್ ಅವರು ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದು, ಮನೆ ಮಂದಿ ಬೇರೆಡೆಗೆ ತೆರಳಿದ್ದ ಸಂದರ್ಭದಲ್ಲಿ ಅವರು ಮನೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಮಂದಿ ಮರಳಿ ಮನೆಗೆ ಬಂದ ವೇಳೆ ಈ ಘಟನೆ ಅವರ ಅರಿವಿಗೆ ಬಂದಿದೆ. ಎರಡು ದಿನಗಳ ಹಿಂದೆಯೇ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.