ಪ್ರಧಾನಿ ಮೋದಿ ಅವರೇ ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ?; ಸಿದ್ದರಾಮಯ್ಯ

Advertisement

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮಂಗಳೂರಿಗೆ ಸ್ವಾಗತ. ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ ಮಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಸಿದ್ದರಾಮಯ್ಯ, ದಕ್ಷಿಣ ಕನ್ನಡದ ಉದ್ಯಮಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು ಬ್ಯಾಂಕ್ ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ. ನವಮಂಗಳೂರು ಬಂದರು ಮಾಜಿ ಪ್ರಧಾನಿ ಇಂದಿರಾಗಾಂಧಿ ಕೊಡುಗೆ . ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ನವಮಂಗಳೂರು ಬಂದರನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರುತ್ತಿರುವುದು ಪ್ರಧಾನಿ ಮೋದಿ. ಬಜ್ಪೆ ವಿಮಾನ ನಿಲ್ದಾಣ, ಎನ್ ಎಂಪಿಟಿ, ಎನ್ ಎಚ್-66, ರೀಜನಲ್ ಎಂಜನಿಯರಿಂಗ್ ಕಾಲೇಜ್, ಎಂಸಿಎಫ್- ಇವೆಲ್ಲ ಕಾಂಗ್ರೆಸ್ ಸಂಸದರ ಕೊಡುಗೆ. ಬಿಜೆಪಿ ಸಂಸದ ನಳೀನ್​ ಕುಮಾರ್​ ಕಟೀಲ್​ ಕೊಡುಗೆ ಏನು? ಮಳೆಯಲ್ಲಿ ಮುಳುಗುವ ಮಂಗಳೂರು? ಕೋಮುದ್ವೇಷದ ಬೆಂಕಿಯಲ್ಲಿ ಬೇಯುತ್ತಿರುವ ಮಂಗಳೂರೇ ಎಂದು ಪ್ರಶ್ನಿಸಿದ್ದಾರೆ.