ಪ್ರಮಾಣ ವಚನಕ್ಕೆ ಕ್ಷಣಗಣನೆ

Advertisement

ಬೆಂಗಳೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಪಾಸ್ ಹೊಂದಿದವರಿಗೆ ಮಾತ್ರ ಕ್ರೀಡಾಂಗಣದ ಒಳಗಡೆ ತೆರಳಲು ಅವಕಾಶ ನೀಡಲಾಗಿದೆ. ಪದಗ್ರಹಣ ಕಾರ್ಯಕ್ರಮದ ಹಿನ್ನಲೆಯಲ್ಲಿ ಸಾಕಷ್ಟು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸಮಾರಂಭದಲ್ಲಿ 8 ಸಿಎಂಗಳು ಪಾಲ್ಗೊಳ್ಳಲಿದ್ದಾರೆ. ಪಶ್ಚಿಮಬಂಗಾಳ ಸಿಎಂ ಮಮತಾ, ರಾಜಸ್ಥಾನ ಸಿಎಂ ಗೆಹ್ಲೋಟ್, ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್, ಬಿಹಾರ ಸಿಎಂ ನಿತೀಶ್, ಹಿಮಾಚಲಪ್ರದೇಶದ ಸಿಎಂ ಸುಖ್‌ವಿಂದರ್ ಸಿಂಗ್ ಸುಖು, ಪುದುಚೆರಿ ಸಿಎಂ ರಂಗಸ್ವಾಮಿ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.