ಬಿಜೆಪಿಗರ ಸ್ವಾರ್ಥ ರಾಜಕಾರಣವೇ ಸೋಲಿಗೆ ಕಾರಣ

Advertisement

ಹುಬ್ಬಳ್ಳಿ: ದುರುದ್ದೇಶ, ಸ್ವಾರ್ಥಕ್ಕೆ ತೆಗೆದುಕೊಂಡ ನಿರ್ಣಯಗಳು ಬಿಜೆಪಿಯ ಹೀನಾಯ ಪರಿಸ್ಥಿಗೆ ಕಾರಣವಾಗಿವೆ. ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಿಸದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಶಿರಹಟ್ಟಿ ಫಕೀರೇಶ್ವರ ಸಂಸ್ಥಾನ ಮಠದ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
ಸಂಯುಕ್ತ ಕರ್ನಾಟಕ ಪತ್ರಿಕೆಯ ಜೊತೆಗೆ ಸೋಮವಾರ ಮಾತನಾಡಿದ ಅವರು, ಅಧಿಕಾರದ ಅವಧಿಯಲ್ಲಿ ಪಕ್ಷದ ಹಿರಿಯ ನಾಯಕರನ್ನು ನಿರ್ಲಕ್ಷಿಸಿ, ನಾಡಿನ ಹಲವು ಮಠಾಧೀಶರನ್ನು ಕಡೆಗಣಿಸಿದ್ದೇ ಬಿಜೆಪಿ ಸೋಲಿಗೆ ಕಾರಣವಾಗಿದೆ ಎಂದು ವಿಶ್ಲೇಷಿಸಿದರು.
ದಕ್ಷಿಣ ಭಾರತದ ಕುದುರೆಗಳನ್ನು ಕತ್ತೆ ಅಂದುಕೊಂಡಿದ್ದೇ ಸಮಸ್ಯೆಗೆ ಕಾರಣ. ರಾಜ್ಯ ನಾಯಕರನ್ನು ಬಿಟ್ಟು ಏನಾದರೂ ಮಾಡುತ್ತೇವೆ ಅಂದುಕೊಂಡಿದ್ದ ಬಿಜೆಪಿ ಕೇಂದ್ರ ನಾಯಕರಿಗೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದರು.
ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ದಿನವೇ, `ಸರ್ಕಾರ ಕಣ್ಣೀರಲ್ಲಿ ಕೊಚ್ಚಿ ಹೋಗುತ್ತದೆ’ ಎಂದು ಭವಿಷ್ಯ ನುಡಿದಿದ್ದೆ. ಜಗದೀಶ ಶೆಟ್ಟರ ಮತ್ತು ಲಕ್ಷ್ಮಣ ಸವದಿ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಿ ಅಂತಲೂ ಹೇಳಿದ್ದೆವು. ನನ್ನ ಹೇಳಿಕೆಯ ಬಗ್ಗೆ ಚಿಂತನೆ ಮಾಡದೇ, ಕೇಸರಿ ಪಡೆ ಎಂದು ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ, ಖಾವಿಧಾರಿಗಳನ್ನ ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.