ಬಿಜೆಪಿ ಗೆಲುವಿನ ಮುನ್ನಡೆ ಬರೆದ ಅಮಿತ್‌ ಶಾ

amit shah
Advertisement

ಗುಜರಾತ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಜರಾತ್‌ನ ಗಾಂಧಿನಗರ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದು, 5 ಲಕ್ಷಗಳ ಮತದ ಅಂತರದಲ್ಲಿ ಗುಜರಾತ್​​​ನ ಗಾಂಧಿ ನಗರ ಕ್ಷೇತ್ರದಿಂದ ಭಾರೀ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್​​​​​ ಅಭ್ಯರ್ಥಿ ಸೋನಾಲ್ ಪಟೇಲ್ ಅವರು ಅಮಿತ್​​​ ಶಾ ಮುಂದೆ ಸ್ಪರ್ಧಿಸಿದರು. 2014ರಲ್ಲಿ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರು ಈ ಕ್ಷೇತ್ರದಿಂದ ಸ್ವರ್ಧಿಸಿದರು. ಇದಕ್ಕೂ ಮೊದಲು 1996ರಲ್ಲಿ ದೇಶದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಕೂಡ ಈ ಕ್ಷೇತ್ರದಿಂದ ಸ್ವರ್ಧಿಸಿ ಗೆಲುವು ಸಾಧಿಸಿದರು. ಗಾಂಧಿ ನಗರ ಬಿಜೆಪಿ ಭದ್ರತಕೋಟೆ ಕೂಡ ಹೌದು. ಅಮಿತ್‌ ಶಾ ಅವರು ಗುಜರಾತ್‌ನ ಗಾಂಧಿನಗರ ಲೋಕಸಭೆ ಕ್ಷೇತ್ರದಲ್ಲಿ 5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಕುರಿತು ಚುನಾವಣೆ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.