ಬಿಟ್ ಕಾಯಿನ್: ಮರು ತನಿಖೆ

Advertisement

ಬೆಂಗಳೂರು: ಬಿಟ್ ಕಾಯಿನ್ ಅಕ್ರಮದ ಬಗ್ಗೆ ಸಂಪೂರ್ಣ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ, ವಿಧಾನಸೌಧದಲ್ಲಿ ಮಾತನಾಡಿದ ಅವರು ಬಿಟ್ ಕಾಯಿನ್ ಅಕ್ರಮದ ಬಗ್ಗೆ ಸಂಪೂರ್ಣ ತನಿಖೆ ನಡೆಸುತ್ತೇವೆ. ಹಿಂದಿನ ಸರ್ಕಾರ ತನಿಖೆಯನ್ನು ಮುಕ್ತಾಯಗೊಳಿಸಿದೆ. ನಾವು ಮರು ತನಿಖೆ ಮಾಡುತ್ತೇವೆ. ಸಿಐಡಿ ಅಡಿಯಲ್ಲಿ SIT ರಚನೆ ಮಾಡಿದ್ದೇವೆ. ಆದರಿಂದ ಹೆಚ್ಚಿನ ತನಿಖೆಯಾಗಬೇಕು ಎಂದರು.
ಬಿಟ್‌ ಕಾಯಿನ್‌ ಪ್ರಕರಣದಲ್ಲಿ ಭಾರಿ ಅವ್ಯವಹಾರ ನಡೆದಿದೆ. ಹ್ಯಾಕರ್‌ ಶ್ರೀಕಿಯನ್ನು ಬಳಸಿಕೊಂಡು ಆಡಳಿತ ಪಕ್ಷದವರು ದೊಡ್ಡ ಮೊತ್ತದ ಹಣ ಲಪಟಾಯಿಸಿದ್ದಾರೆ ಎಂದು ಆಗಿನ ಕಾಂಗ್ರೆಸ್‌ ಪಕ್ಷದ ನಾಯಕರು ಆರೋಪಿಸಿದ್ದರು. ಅಲ್ಲದೆ ತಮ್ಮ ಸರ್ಕಾರ ಆಡಳಿತಕ್ಕೆ ಬಂದರೆ ಬಿಟ್‌ ಕಾಯಿನ್‌ ಹಗರಣದ ತನಿಖೆ ನಡೆಸುವುದಾಗಿ ಸಹ ಕಾಂಗ್ರೆಸ್‌ ಪಕ್ಷ ಹೇಳಿತ್ತು.