ಬೆಂಗಳೂರು: ನಗರದ ಕೆಂಬ್ರಿಡ್ಜ್ ಲೇಔಟ್ನಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಉದ್ಘಾಟಿಸಿ ವಿಶೇಷ ಅಂಚೆ ಲಕೋಟೆ ಮತ್ತು ಅಂಚೆ ಕಚೇರಿಯ ಮಾದರಿ ಬಿಡುಗಡೆ ಮಾಡಿದರು.
ಇದೇ ವರ್ಷ ಮಾರ್ಚ್ 21 ರಿಂದ ನಿರ್ಮಾಣದ ಕಾರ್ಯ ಆರಂಭವಾಗಿದ್ದು 44 ದಿನಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಕಟ್ಟಡದ ನಿರ್ಮಾಣ ಕಾರ್ಯ ಮೇ 3ರ ಒಳಗಡೆಯೇ ಪೂರ್ಣಗೊಂಡಿದ್ದರೂ, ಒಳಚರಂಡಿ ಮತ್ತು ನೀರಿನ ಸಂಪರ್ಕ ಸಂಬಂಧ ಎರಡು ತಿಂಗಳು ಸಮಯ ತೆಗೆದುಕೊಂಡಿದೆ. ಈ ಅಂಚೆ ಕಚೇರಿಗೆ “ಕೇಂಬ್ರಿಡ್ಜ್ ಲೇಔಟ್ ಪಿಒ” ಎಂದು ಹೆಸರಿಸಲಾಗಿದೆ.