ಬೆಂಗಳೂರು: ಸೆರೆಯಾದ ಚಿರತೆ

Advertisement

ಬೆಂಗಳೂರು: ಕಳೆದ ಮೂರು ದಿನಗಳಿಂದ ಸಿಲಿಕಾನ್ ಸಿಟಿ ಜನರಲ್ಲಿ ಆತಂಕ ಉಂಟುಮಾಡಿದ್ದ ಚಿರತೆಯನ್ನು ಇಂದು ಸೆರೆಹಿಡಿಯಲು ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಕೂಡ್ಲು ಸಮೀಪದ ಕೃಷ್ಣಾರೆಡ್ಡಿ ಬಡಾವಣೆಯಲ್ಲಿ ಕಳೆದ ಭಾನುವಾರ ರಾತ್ರಿ ಚಿರತೆಯೊಂದು ಓಡಾಡಿತ್ತು. ರಾತ್ರಿ 11 ಗಂಟೆಗೆ ಕಾಂಪೌಂಡ್ ಗೋಡೆ ಜಿಗಿದು ಓಡಿದ್ದನ್ನು ಪರಪ್ಪನ ಅಗ್ರಹಾರ ಲಾ ಅಂಡ್ ಆರ್ಡರ್ ಪೊಲೀಸರು ಗಮನಿಸಿದ್ದರು. ಮರುದಿನ ಅಲ್ಲಿ ಚಿರತೆಯ ಹೆಜ್ಜೆಗಳು ಪತ್ತೆಯಾಗಿತ್ತು. ಕಡೆಂಜಾ ಅಪಾರ್ಟ್ಮೆಂಟ್‌ನಲ್ಲಿ ಮಧ್ಯಾಹ್ನದ ಹೊತ್ತಿಗೆ ಚಿರತೆ ಮೆಟ್ಟಿಲು ಹತ್ತಿ ಹೋಗುವುದು ಸಿಸಿ ಟಿವಿಯಲ್ಲೂ ಸೆರೆಯಾಗಿತ್ತು. ಸೋಮವಾರ ಸಂಜೆಯಿಂದಲೇ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ನಿನ್ನೆ ಇಡೀ ದಿನ ಕಾರ್ಯಾಚರಣೆ ನಡೆಸಿದರು ಕಣ್ಣಿಗೆ ಬಿಳದ ಚಿರತೆ ಸತತ ಕಾರ್ಯಾಚರಣೆ ನಂತರ ಇಂದು ಸೆರೆಹಿಡಿದಿದ್ದಾರೆ.