ಬ್ರಾಹ್ಮಣ ಸಿಎಂ ಆಗಲಿ, ಬೇಡ ಎಂದವರು ಯಾರು?: ಎಚ್‌ಡಿಕೆ

ಕುಮಾರಸ್ವಾಮಿ
Advertisement

ರಾಜ್ಯದಲ್ಲಿ ಬ್ರಾಹ್ಮಣ ಸಿಎಂ ಆಗಲಿ. ಬೇಡ ಎಂದವರು ಯಾರು? ನನ್ನ ಸಹಮತವೂ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.
ಯಶವಂತಪುರ ವಿಧಾನಸಭೆ ಕ್ಷೇತ್ರದ ಕಾರ್ಯಕರ್ತರ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬ್ರಾಹ್ಮಣ ಸಮುದಾಯದ ವಿರುದ್ಧ ನಾನು ಹೇಳಿಕೆ ಕೊಟ್ಟಿಲ್ಲ. ರಾಜ್ಯದ ಬ್ರಾಹ್ಮಣ ಸಮುದಾಯವನ್ನು ನಾನೆಲ್ಲೂ ನಿಂದಿಸಿಲ್ಲ. ನನ್ನ ಹೇಳಿಕೆಯನ್ನು ತಿರುಚುವ ಪ್ರಯತ್ನವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆಯೇ ಹೊರತು ನಾನು ಎತ್ತಿದ ವಿಷಯದ ಬಗ್ಗೆ ಚರ್ಚೆ ಮಾಡುತ್ತಿಲ್ಲ ಎಂದರು.
ಕರ್ನಾಟಕದ ಮೇಲೆ ದಾಳಿ ನಡೆಸಿ ಕನ್ನಡ ಪರಂಪರೆ, ಸಂಸ್ಕೃತಿಯ ಮೇಲೆ ದಾಳಿ ನಡೆಸಿದ ಮರಾಠಿ ಪೇಶ್ವೆಗಳ ಡಿಎನ್​ಎ ಹೊಂದಿರುವ ವ್ಯಕ್ತಿ ಸಿಎಂ ಆಗುವುದು ಬೇಡ ಎಂದಿದ್ದೇನೆ. ಬ್ರಾಹ್ಮಣ ಸಮುದಾಯವೂ ಸೇರಿ ನಾನು ಯಾವುದೇ ಸಮಾಜಕ್ಕೆ ಅಗೌರವ ತೋರಿಲ್ಲ. ತೋರುವುದೂ ಇಲ್ಲ ಎಂದು ಸ್ಪಷ್ಟಪಡಿಸಿದರು.