ಭಾರತಕ್ಕೆ ಬಂದಿಳಿದ ಆಸ್ಟ್ರೇಲಿಯಾ ಪ್ರಧಾನಿ

ಆಸ್ಟ್ರೇಲಿಯಾ
Advertisement

ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಇಂದು ವಿಶೇಷ ವಿಮಾನದ ಮೂಲಕ ಅಹ್ಮದಾಬಾದ್‌ಗೆ ಆಗಮಿಸಿದ್ದಾರೆ. ಬುಧವಾರ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ಮತ್ತು ಭಾರತ ಕ್ರಿಕೆಟ್‌ ತಂಡದ ಮಧ್ಯೆ ನಡೆಯಲಿರುವ ಬಾರ್ಡರ್​-ಗವಾಸ್ಕರ್​ ಟ್ರೋಫಿ ಸರಣಿಯ ನಾಲ್ಕನೇ ಟೆಸ್ಟ್​ ಪಂದ್ಯವನ್ನು ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೀಕ್ಷಿಸಲಿದ್ದಾರೆ. ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ ಭಾರತದ ಪಾಲಿಗೆ ಈ ಪಂದ್ಯ ನಿರ್ಣಾಯಕವಾಗಿದೆ.