ಮಂಗಳೂರು ರಥೋತ್ಸವ

Advertisement

ಮಂಗಳೂರು: ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ “ಮಂಗಳೂರು ರಥೋತ್ಸವ” ಸಹಸ್ರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು .
ಬ್ರಹ್ಮರಥೋತ್ಸವ ಪ್ರಯುಕ್ತ ಬೆಳಿಗ್ಗೆ ಮಹಾಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀ ದೇವರಿಗೆ ಶತಕಲಶಾಭಿಷೇಕ, ಗಂಗಾಭಿಷೇಕ, ಪುಳಕಾಭಿಷೇಕ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನೆರವೇರಿತು . ಯಜ್ಞಮಂಟಪದಲ್ಲಿ ಮಹಾಯಜ್ಞ ಮಹಾ ಪೂರ್ಣಾಹುತಿ ಬಳಿಕ ಶ್ರೀ ದೇವರು ಸ್ವರ್ಣ ಪಲ್ಲಕಿಯಲ್ಲಿ ವಿರಾಜಮಾನರಾಗಿ ಭವ್ಯ ಬ್ರಹ್ಮರಥದಲ್ಲಿ ರಥಾರೂಢರಾಗಿ ಮಂಗಳೂರು ರಥೋತ್ಸವ ನೆರವೇರಿತು. ದೇಶ ವಿದೇಶಗಳಿಂದ ಗೌಡ ಸಾರಸ್ವತ ಸಮಾಜದ ಸಹಸ್ರಾರು ಪಾಲ್ಗೊಂಡು ಪುನೀತರಾದರು.