ಮಗು ಸಾವು: ನಿರ್ಲಕ್ಷ್ಯ ಆರೋಪ

Advertisement

ಮಂಗಳೂರು: ಬೆಳ್ತಂಗಡಿಯ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾದ ಒಂದೂವರೆ ತಿಂಗಳ ಮಗು ಸಾವನ್ನಪ್ಪಿದೆ. ಮಗುವಿನ ಸಾವಿಗೆ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯ ಕಾರಣ ಎಂದು ಮನೆ ಮಂದಿ ದೂರಿದ್ದು, ಆಸ್ಪತ್ರೆಯಲ್ಲಿ ವೈದ್ಯರಿರಲಿಲ್ಲ ಎಂದಿದ್ದಾರೆ.
ಧರ್ಮಸ್ಥಳ ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು ಸವಿತಾ ದಂಪತಿಯ ಹೆಣ್ಣು ಮಗು ಅಂಶಿಕಾ ಮೃತ ದುರ್ದೈವಿ. ಮಗುವಿನಲ್ಲಿ ಕಫ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಅಂಶಿಕಾಳನ್ನು ದಾಖಲು ಮಾಡಲಾಗಿತ್ತು. ಈ ಸಂದರ್ಭದಲ್ಲಿ ವೈದ್ಯರಿರಲಿಲ್ಲ, ನರ್ಸ್ ಇಂಜೆಕ್ಷನ್ ನೀಡದ ಬಳಿಕ ಮಗು ಸಾವನ್ನಪ್ಪಿದೆ ಎಂದು ಮನೆ ಮಂದಿ ಆರೋಪಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಮಾಜಿ ಶಾಸಕ ವಸಂತ ಬಂಗೇರ ಆಗಮಿಸಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡು ಸಾವನ್ನಪ್ಪಿದ ತಂದೆಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲು ಸಲಹೆ ನೀಡಿದ್ದಾರೆ