ಮಠಾಧೀಶರು ಚುನಾವಣೆಗೆ ಸ್ಪರ್ಧಿಸೋ ಬಗ್ಗೆ ಏನು ಹೇಳಲ್ಲ: ಸಿಎಂ

ರಾಮಮಂದಿರ
Advertisement


ಹುಬ್ಬಳ್ಳಿ: ಮುಂಬರುವ ಚುನಾವಣೆಯಲ್ಲಿ ಮಠಾಧೀಶರು ಸ್ಪರ್ಧಿಸುವ ಕುರಿತು ನನ್ನನ್ನು ಯಾರು ಸಂಪರ್ಕಿಸಿಲ್ಲ, ಚರ್ಚಿಸಿಲ್ಲ. ಅಲ್ಲದೆ ಮಠಾಧೀಶರು ಚುನಾವಣೆಗೆ ನಿಲ್ಲುತ್ತಾರೆ ಎನ್ನುವ ಬಗ್ಗೆ ಏನು ಹೇಳಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಲ್ಲಿನ ಆದರ್ಶನಗರದ ತಮ್ಮ ನಿವಾಸದಲ್ಲಿ‌ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಸಿದ್ದರಾಮಯ್ಯ ಸುಳ್ಳಿನ ಸುಳಿಯಲ್ಲಿ ಸಿಲುಕುತ್ತಿದ್ದಾರೆ:
ಮಾಜಿ ಸಿಎಂ ಸಿದ್ಧರಾಮಯ್ಯ ಅರ್ಕಾವತಿ ಹಗರಣ ಸಿಬಿಐ ತನಿಖೆಗೆ ಎಂಬ ವಿಚಾರದ ಬಗ್ಗೆ ಯಾರು ಹೇಳಿದ್ದು ಎಂದು ಪ್ರಶ್ನಿಸಿದ ಬೊಮ್ಮಾಯಿ ಅವರು, ಅರ್ಕಾವತಿ ಹಗರಣದ ಬಗ್ಗೆ ವರದಿ ಕೊಡಲಾಗಿದೆ. ಮುಂದೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ಸಂಪುಟದಲ್ಲಿ ಚರ್ಚಿಸಿ ಮುಂದಿನ ನಿರ್ಧಾನ ಕೈಗೊಳ್ಳುತ್ತೇವೆ ಎಂದರು.
ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸಿದ್ಧರಾಮಯ್ಯ ಆರೋಪ‌ ವಿಚಾರವಾಗಿ ಮಾತನಾಡಿ, ಸಿದ್ಧರಾಮಯ್ಯ ತಾವೇ ಸುಳ್ಳಿನ ಸುಳಿಯಲ್ಲಿ ಸಿಲುಕುತ್ತಿದ್ದಾರೆ. ಸಿದ್ಧರಾಮಯ್ಯ ಹೇಳಿರೋ ಸುಳ್ಳು ಒಂದೊಂದಾಗಿ ಹೊರ ಬರುತ್ತದೆ. ಅವರು ಪ್ರಣಾಳಿಕೆಯಲ್ಲಿ ಘೋಷಿಸಿರುವ ಭರವಸೆಗಳ ಕುರಿತು ವಿಧಾನಸಭೆ ಅಧಿವೇಶನದಲ್ಲಿಯೇ ಹೇಳಿದ್ದೇ‌ನೆ. ಇನ್ನೊಬ್ಬರ ಬಗ್ಗೆ ಸಾವಿರ ಬಾರಿ ಸುಳ್ಳು ಹೇಳಿದರೆ ಅದು ಸತ್ಯವಾಗುತ್ತದೆ ಎನದನುವ ಭ್ರಮೆಯಲ್ಲಿದ್ದಾರೆ.
ಅವರು ಹೇಳಿದ ತಕ್ಷಣ ಸುಳ್ಳು ಸತ್ಯವಾಗಲ್ಲ, ಸತ್ಯ ಸುಳ್ಳಾಗಲ್ಲ
ಆದರೆ ಅತಿಯಾದ ಸುಳ್ಳು ಹೇಳಿದ ಮೇಲೆ ಸುಳ್ಳೇ ಸತ್ಯ ಅಂತ ಅವರಿಗೆ ನಂಬಿಕೆ ಬರಲಾರಂಬಿಸಿದೆ. ಸುಳ್ಳಿನ ಸುಳಿಯಲ್ಲಿ ಕಾಂಗ್ರೆಸ್ ಸಿಕ್ಕಿಹಾಕಿಕೊಳ್ಳುತ್ತದೆ ಎಂದರು.
ಸೋನಿಯಾಗಾಂಧಿ ರಾಜಕೀಯ ನಿವೃತ್ತಿ ವಿಚಾರ ಅವರ ವೈಯಕ್ತಿಕವಾಗಿದೆ. ಈ ಬಗ್ಗೆ ಮಾತನಾಡಲ್ಲ ಎಂದರು.
7 ವೇತನ ಆಯೋಗ ಜಾರಿಗಾಗಿ ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಿಚಾರವಾಗಿ ನಾನು ಈಗಾಗಲೇ ಅವರ ಜೊತೆ ಚರ್ಚಿಸಿದ್ದೇನೆ. ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದರು.
ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಅಂದರೆ ಅವರು ಸಕ್ರಿಯ ರಾಜಕಾರಣದಿಂದ ದೂರವಾಗಲ್ಲ. ಈ ಬಗ್ಗೆ ಅವರೇ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿಯನ್ನು ಅವರು ಮತ್ತಷ್ಟು ಬಲಪಡಿಸುತ್ತಾರೆ ಎಂದರು.

ಮೋದಿ ನಾಳೆ ಭೇಟಿ:
ಪ್ರಧಾನಿ ನರೇಂದ್ರ ಮೋದಿ ಅವರು‌ನಾಳೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ವಿವಿಧ ಕಾಮಗಾರಿಗಳಿಗೆ ಚಾಲನೆ, ಬೆಳಗಾವಿ ರೋಡ್ ಶೋ, ಕಿಸಾನ್ ಸಮ್ಮಾನ್ ಕಾರ್ಡ್ ಬಿಡುಗಡೆ ಮಾಡಲಿದ್ದಾರೆ. ಎರಡೂ ಕಡೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ರಾಷ್ಟ್ರೀಯ ಮುಖಂಡರಾದ ಧರ್ಮೇಂಧ್ರ ಪ್ರಧಾನ್, ಅಮಿತ್ ಶಾ ರಾಜ್ಯದಲ್ಲಿಯೇ ಮನೆ ಮಾಡೋ ವಿಚಾರ ವಾಗಿ ಇಬ್ಬರೂ ರಾಜ್ಯದಲ್ಲಿ ಇದ್ದು ಮಾರ್ಗದರ್ಶನ ಮಾಡಲಿದ್ದಾರೆ ಎಂದರು.