ಮನೆಗೋಡೆ ಕುಸಿದು ಗಾಯಗೊಂಡಿದ್ದ ಮಗು ಸಾವು

Advertisement

ಹಾವೇರಿ: ನಿರಂತರ ಮಳೆ ಹಿನ್ನಲೆ ಮನೆ ಗೋಡೆ ಕುಸಿದು ಗಾಯಗೊಂಡಿದ್ದ ಪುಟ್ಟ ಮಗುವೊಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.
ಹಾವೇರಿ ತಾಲೂಕಿನ ಮಾಳಪುರ ಗ್ರಾಮದ ಭಾಗ್ಯ ಚಲಮರದ್ (3) ಮೃತ ಬಾಲಕಿ. ಕಳೆದ ಎರಡು ದಿನಗಳ ಹಿಂದೆ ನಿರಂತರ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಮಗು ಗಂಭೀರವಾಗಿ ಗಾಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಕೀಮ್ಸ್ ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ. ಇನ್ನೊಂದು ಗಾಯಗೊಂಡ ಮಗುವಿಗೆ ಹುಬ್ಬಳ್ಳಿ ಕೀಮ್ಸ್ ನಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಕುರಿತು ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.