ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಅಲ್ಕಾ ಲಂಬಾ

Advertisement

ನವದೆಹಲಿ: ದೆಹಲಿಯ ಮಾಜಿ ಶಾಸಕಿ ಅಲ್ಕಾ ಲಂಬಾ ಅವರನ್ನು ತನ್ನ ಮಹಿಳಾ ವಿಭಾಗದ ಮುಖ್ಯಸ್ಥೆಯಾಗಿ ನೇಮಕ ಮಾಡಿದೆ,
ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕಗೊಂಡಿರುವ ಲಂಬಾ ಅವರನ್ನು ಕಳೆದ ವರ್ಷ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಗೆ ವಿಶೇಷ ಆಹ್ವಾನಿತರಾಗಿ ಹೆಸರಿಸಲಾಗಿತ್ತು. ಚಿಕ್ಕ ವಯಸ್ಸಿನಲ್ಲೇ ರಾಜಕೀಯ ಜೀವನ ಆರಂಭಿಸಿದ ಲಂಬಾ, 1995ರಲ್ಲಿ ಎನ್‌ಎಸ್‌ಯುಐ ಅಭ್ಯರ್ಥಿಯಾಗಿ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಡಿಯುಎಸ್‌ಯು) ಅಧ್ಯಕ್ಷರಾಗಿ ಆಯ್ಕೆಯಾದರು.2014 ರಲ್ಲಿ ಅವರು ಕಾಂಗ್ರೆಸ್ ತೊರೆದು ಎಎಪಿ ಸೇರಿದರು ಆದರೆ 2019 ರಲ್ಲಿ ಹಳೆಯ ಪಕ್ಷಕ್ಕೆ ಮರಳಿದರು. ಅವರು 2015 ರಲ್ಲಿ ಚಾಂದಿನಿ ಚೌಕ್ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. ನಿರ್ಗಮಿತ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ಮತ್ತು ನಿರ್ಗಮಿತ ಎನ್‌ಎಸ್‌ಯುಐ ಅಧ್ಯಕ್ಷ ನೀರಜ್ ಕುಂದನ್ ಅವರ ಕೊಡುಗೆಯನ್ನು ಪಕ್ಷವು ಶ್ಲಾಘಿಸುತ್ತದೆ ಎಂದು ಕಾಂಗ್ರೆಸ್ ತಿಳಿಸಿದೆ.