ಮಾಜಿ ಮುಖ್ಯಮಂತ್ರಿ ಇಂಥ ಸ್ಥಿತಿ ಬರಬಾರದು: ಬಿ.ವೈ ವಿಜಯೇಂದ್ರ

vijayendra
Advertisement

ರಾಯಚೂರು: ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯನವರಿಗೆ ಕ್ಷೇತ್ರ ಹುಡುಕಾಟದ ಪರಿಸ್ಥಿತಿ ಬರಬಾರದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ವ್ಯಂಗ್ಯವಾಗಿ ಟೀಕಿಸಿದರು.
ಜಿಲ್ಲಾ ಯುವ ಮೋರ್ಚಾ ಸಮಾವೇಶದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ್ತೆ ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂಬ ಕನಸು ಕಟ್ಟಿಕೊಂಡಿರುವವರಿಗೆ ಈ ರೀತಿ ಪರಿಸ್ಥಿತಿ ಬಂದಿರುವುದು ಹಾಸ್ಯಸ್ಪದ ಎಂದರು.
ಸಚಿವ ಸೋಮಣ್ಣ ಅವರು ತಮ್ಮ ಬಗ್ಗೆ ಹಗರುವಾಗಿ ಮಾತನಾಡಿರುವ ಕುರಿತು ಪ್ರತಿಕ್ರಿಯಿಸಿ, ಅವರು ಹಿರಿಯ ನಾಯಕರಿದ್ದಾರೆ. ಅವರು ಏನು ಅಂದರೂ ಆಶೀರ್ವಾದ ಇದ್ದಂತೆ. ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದೆ. ಪಕ್ಷದ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಯಾರಿಗೆ ಟಿಕೆಟ್ ನೀಡಬೇಕು ಎಂಬುವುದನ್ನು ತೀರ್ಮಾನಿಸುತ್ತಾರೆ. ತಂದೆ, ಮಗ ಎಂಬ ಸಂಬಂಧಗಳನ್ನು ನೋಡಿ ಟಿಕೆಟ್ ನೀಡುವುದಿಲ್ಲ. ಅರ್ಹತೆಯ ಆಧಾರ ಹಾಗೂ ಪಕ್ಷದ ಸಂಘಟನೆ ಮೇಲೆ ಟಿಕೆಟ್ ನಿರ್ಧರಿಸುತ್ತಾರೆ ಎಂದರು.
ತಮ್ಮ ಬಗ್ಗೆ ವರಿಷ್ಠರಿಗೆ ದೂರು ಸಲ್ಲಿಸಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವರಿಷ್ಠರಿಗೆ ದೂರು ಸಲ್ಲಿಸಿದ್ದಾರೆ ಅಂದರೆ ಆ ವ್ಯಕ್ತಿ ದೊಡ್ಡ ಪ್ರಮಾಣದಲ್ಲಿ ಬೆಳೆದಿದ್ದಾನೆ ಎಂದು ಅರ್ಥ. ಯಾರು ಮುಖ್ಯಮಂತ್ರಿಯಾಗಬೇಕು ಎಂದು ಬಿಜೆಪಿ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ತಿಳಿಸಿದರು. ಯಡಿಯೂರಪ್ಪ ಅವರು ಈಗಾಗಲೇ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಲು ನನ್ನ ಹೆಸರನ್ನು ಘೋಷಣೆಯನ್ನು ಮಾಡಿದ್ದಾರೆ. ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ಶಿಕಾರಿಪುರದಿಂದ ಸ್ಪರ್ಧಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.