ಮಾಡಾಳ್ ಲಂಚ ಪ್ರಕರಣ: ಇಬ್ಬರು ತನಿಖಾಧಿಕಾರಿಗಳ ಬದಲಾವಣೆ

ಮಾಡಾಳ
Advertisement

ಬೆಂಗಳೂರು: ಲಂಚ ಸ್ವೀಕಾರ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಬಂಧನ ಪ್ರಕರಣದ ತನಿಖಾಧಿಕಾರಿಗಳನ್ನು ಬದಲಿಸಲಾಗಿದೆ. ಪ್ರಕರಣ ದಾಖಲಾದಾಗಿನಿಂದ ತನಿಖೆ ಕೈಗೊಂಡಿದ್ದ ಡಿವೈಎಸ್ಪಿ ಪ್ರಮೋದ್ ಕುಮಾರ್ ಹಾಗೂ ಇನ್ಸ್​​ಪೆಕ್ಟರ್ ಕುಮಾರಸ್ವಾಮಿ ಅವರ ಸ್ಥಾನಕ್ಕೆ ಡಿವೈಎಸ್ಪಿ ಆಂಥೋನಿ ಜಾನ್ ಹಾಗೂ ಇನ್ಸ್​​ಪೆಕ್ಟರ್ ಬಾಲಾಜಿ ಬಾಬು ನೇಮಕಗೊಂಡಿದ್ದಾರೆ. ಕರ್ನಾಟಕ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಕೋರಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲೋಕಾಯುಕ್ತ ಪೊಲೀಸರು ದಾಖಲು ಮಾಡಿರುವ ಎಫ್‌ಐಆರ್ ರದ್ದುಗೊಳಿಸಬೇಕು ಎಂದು ಸಹ ಮತ್ತೊಂದು ಅರ್ಜಿ ಸಲ್ಲಿಕೆ ಮಾಡಿದ್ದಾರೆ. 40 ಲಕ್ಷ ರೂ. ಲಂಚ ಪಡೆಯುವಾಗ ಶಾಸಕರ ಪುತ್ರ ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದರು. ಬಳಿಕ ಅವರ ಮನೆ ಮೇಲೆ ದಾಳಿ ಮಾಡಿದಾಗ 6 ಕೋಟಿ ರೂ. ನಗದು ಹಣ ಪತ್ತೆಯಾಗಿತ್ತು.