ಮೆಡಿಕಲ್‌ ಸ್ಟೋರ್‌ಗಳ ಕಳ್ಳದಂಧೆ ಬೆಳಕಿಗೆ

Advertisement

ರಾಜ್ಯಾದ್ಯಂತ ಭ್ರೂಣಲಿಂಗ ಪತ್ತೆ ಸಂಪೂರ್ಣ ತಡೆಗೆ ನಮ್ಮ ಆರೋಗ್ಯ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಿ ಹಲವಾರು ಪ್ರಕರಣಗಳನ್ನು ಬಯಲಿಗೆಳೆದಿದ್ದಾರೆ.

ಬೆಂಗಳೂರು: ಸಾಮಾಜಿಕ ಪಿಡುಗಾಗಿರುವ ಹೆಣ್ಣು ಭ್ರೂಣ ಹತ್ಯೆ ಹಾಗೂ ಭ್ರೂಣ ಲಿಂಗ ಪತ್ತೆಯನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ತಡೆಯುವುದೇ ನಮ್ಮ ಆರೋಗ್ಯ ಇಲಾಖೆ ಆದ್ಯತೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹಾಗೂ ಭ್ರೂಣ ಲಿಂಗ ಪತ್ತೆಯನ್ನು ಸಂಪೂರ್ಣವಾಗಿ ಮಟ್ಟಹಾಕಲು ನಮ್ಮ ಆರೋಗ್ಯ ಇಲಾಖೆ ಈಗಾಗಲೇ ಕಾರ್ಯೋನ್ಮುಖವಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಭ್ರೂಣ ಹತ್ಯೆ ಮಾತ್ರೆ ಮಾರಾಟದ ಲೆಕ್ಕ ನೀಡದ ಸಗಟು ಔಷಧ ಮಾರಾಟಗಾರರು ಹಾಗೂ ಚಿಲ್ಲರೆ ಔಷಧ ಅಂಗಡಿ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 4 ಔಷಧ ಅಂಗಡಿಗಳನ್ನು ಬಂದ್‌ ಮಾಡಿಸಲಾಗಿದ್ದು 30 ಅಂಗಡಿಗಳ ಲೈಸೆನ್ಸ್‌ ಸಸ್ಪೆಂಡ್‌ ಮಾಡಲಾಗಿದೆ. ಜೊತೆಗೆ ನಾಲ್ವರು ಔಷಧ ವಿತರಕರ ವಿರುದ್ಧ ಕೇಸ್‌ ದಾಖಲಿಸಲಾಗುತ್ತಿದೆ.

ನಮ್ಮ ಆರೋಗ್ಯ ಇಲಾಖೆ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ನಡೆಸಿ ಮಂಡ್ಯ ಜಿಲ್ಲೆಯಲ್ಲಿ ಔಷಧ ಸಗಟು ವರ್ತಕರು, ಮೆಡಿಕಲ್‌ ಸ್ಟೋರ್‌ಗಳ ಕಳ್ಳದಂಧೆಗಳನ್ನು ಬೆಳಕಿಗೆ ತಂದಿದ್ದಾರೆ. ರಾಜ್ಯಾದ್ಯಂತ ಭ್ರೂಣಲಿಂಗ ಪತ್ತೆ ಸಂಪೂರ್ಣ ತಡೆಗೆ ನಮ್ಮ ಆರೋಗ್ಯ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಿ ಹಲವಾರು ಪ್ರಕರಣಗಳನ್ನು ಬಯಲಿಗೆಳೆದಿದ್ದಾರೆ. ಜೊತೆಗೆ ಹೆಣ್ಣು ಭ್ರೂಣ ಹತ್ಯೆಯನ್ನು ತಡೆಗೆ ಆಸ್ಪತ್ರೆಗಳು, ಸ್ಕ್ಯಾನಿಂಗ್‌ ಸೆಂಟರ್‌ ಮೇಲೆ ನಿಗಾ ವಹಿಸಲಾಗಿದೆ.

ಸಾಮಾಜಿಕ ಪಿಡುಗಾಗಿರುವ ಹೆಣ್ಣು ಭ್ರೂಣ ಹತ್ಯೆ ಹಾಗೂ ಭ್ರೂಣ ಲಿಂಗ ಪತ್ತೆಯನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ತಡೆಯುವುದೇ ನಮ್ಮ ಆರೋಗ್ಯ ಇಲಾಖೆ ಆದ್ಯತೆಯಾಗಿದ್ದು ಈ ನಿಟ್ಟಿನಲ್ಲಿ ಸರ್ವ ರೀತಿಯಲ್ಲಿಯೂ ನಮ್ಮ ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ ಎಂದಿದ್ದಾರೆ.