ಮೇಲ್ಸೇತುವೆಯಿಂದ ಜಿಗಿದು ಕೆಪಿಟಿಸಿಎಲ್‌ ಗುತ್ತಿಗೆ ನೌಕರ ಆತ್ಮಹತ್ಯೆ

Advertisement

ಬೆಂಗಳೂರು: ನಗರದ ನಾಯಂಡಹಳ್ಳಿ ಫ್ಲೈಓವರ್ ಮೇಲಿಂದ ಜಿಗಿದು ನವ ವಿವಾಹಿತ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ನವೀನ್ (30) ಜ್ಞಾನಭಾರತಿ ನಿವಾಸಿಯಾಗಿದ್ದು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ದಲ್ಲಿ ಗುತ್ತಿಗೆ ನೌಕರನಾಗಿ ಕೆಲಸ‌ ಮಾಡುತ್ತಿದ್ದನು. ಈ ಘಟನೆ ಬೆಳಗಿನ ಜಾವ ನಡೆದಿದ್ದು ಬೆಳಗ್ಗೆ 8:20ರ ಸುಮಾರಿಗೆ ಫ್ಲೈಓವರ್​ ಮೇಲೆ ಬೈಕ್​ ಪಾರ್ಕ್​ ಮಾಡಿ, ಏಕಾಏಕಿ ಕೆಳಗೆ ಜಿಗಿದಿದ್ದಾನೆ. ನವೀನ್​ ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದನು. ಬೆಳಗ್ಗೆ ಕಛೇರಿ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ನವೀನ್‌ ಫ್ಲೈಓವರ್‌ ಮೇಲಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಟರಾಯನಪುರ ಸಂಚಾರ ಪೊಲೀಸರು ಕೂಡಲೆ ನವೀನ್​ ಬಳಿ ಧಾವಿಸಿದ್ದಾರೆ. ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.