ಮೋದಿಗೆ ವಿಷ ಸರ್ಪ ಎಂದವರನ್ನ ಮನೆಗಟ್ಟಿ

amit shah
Advertisement

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಲ್ಲಿಕಾರ್ಜುನ ಖರ್ಗೆ ವಿಷ ಸರ್ಪ ಎಂದಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಮನೆಗಟ್ಟಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಕರೆ ನೀಡಿದರು. ಅಣ್ಣಿಗೇರಿ ಯಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಪರ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಭಾಷಣದುದ್ದಕ್ಕೂ ಕಾಂಗ್ತೆಸ್ ಪಕ್ಷದ ನಾಯಕರ ವಿರುದ್ಧ ನಂಜುಕಾರಿದರು.

ಸೋನಿಯಾ ಗಾಂಧಿ ಮೌತ್ ಕಾ ಸೌದಾಗಾರ ಎಂದಿದ್ದರು. ಪ್ರಿಯಾಂಕ ಗಾಂಧಿ ಕೀಳು ಮಾತಿನಲ್ಲಿ ಟೀಕಿಸಿದ್ದರು. ಮತ್ತೊಬ್ಬ ಕಾಂಗ್ರೆಸ್ ನಾಯಕ ಮೋದಿಗೆ ಸಮಾಧಿ ತೋಡುವ ಹೇಳಿಕೆ ನೀಡಿದ್ದ. ಈಗ ಖರ್ಗೆ ವಿಷ ಸರ್ಪ ಎಂದಿದ್ದಾರೆ. ಇಂತಹ ಹೀನ ಮನಸ್ಥಿತಿಯ ಕಾಂಗ್ರೆಸ್ ನಾಯಕರನ್ನು ಬೆಂಬಲಿಸಬೇಡಿ . ಜಾಗತಿಕ ಮಟ್ಟದಲ್ಲಿ ಭಾರತವನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋದ ಪ್ರಧಾನಿ ಮೋದಿ ಅವರನ್ನು ಬೆಂಬಲಿಸಿ ಎಂದು ಕರೆ ನೀಡಿದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ದಂಗೆ ಆಗುತ್ತದೆ ಎಂಬ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ಕಾಂಗ್ರೆಸ್ ನಾಯಕರು ನನ್ನ ವಿರುದ್ಧ ಪ್ರಕರಣ ದಾಖಲಿಸಿದ್ದಾರಂತೆ. ದಾಖಲಿಸಿಕೊಳ್ಳಲಿ ನಾನೇನು ತಲೆ ಕೆಡಿಸಿಕೊಳ್ಳಲ್ಲ ಎಂದರು.

ಪಿಎಫ್ಐ ಸಂಘಟನೆ ತಲೆ ಮೇಲೆ ಕೈ ಇಟ್ಟು ಆಶೀರ್ವಾದ ಮಾಡಿ ಕರ್ನಾಟಕದಲ್ಲಿ ಮತೀಯ ಸಂಘರ್ಷಕ್ಕೆ ಕುಮ್ಮಕ್ಕು ನೀಡಿದವರನ್ನು ಏನೆಂದು ಕರೆಯಬೇಕು? ಎಂದು ಪ್ರಶ್ನಿಸಿದರು.
ಕರ್ನಾಟಕದಲ್ಲಿ ಡಬಲ್ ಎಂಜಿನ್ ಸರ್ಕಾರ ಇದ್ದ ಪರಿಣಾಮ ಅಭಿವೃದ್ಧಿ ಸಾದ್ಯವಾಗಿದೆ. 2024 ರಲ್ಲಿ ಪ್ರಧಾನಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗಲು ಈ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿ ಎಂದು ಮನವಿ ಮಾಡಿದರು.