ಮೋದಿ ಉಪನಾಮ ಹೇಳಿಕೆ: ಆಗಸ್ಟ್‌ 4ರಂದು ವಿಚಾರಣೆ

Advertisement

ದೆಹಲಿ: ಕಾಂಗ್ರೆಸ್​ ನಾಯಕ ರಾಹುಲ್​​ ಗಾಂಧಿ ಅವರು ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್​​ ಕೋರ್ಟ್ ನೀಡಿದ 2 ವರ್ಷ ಜೈಲು ಶಿಕ್ಷೆ ಆದೇಶ ತಡೆ ನೀಡುವಂತೆ ಗುಜರಾತ್​ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ ಅರ್ಜಿಯನ್ನು ಆಗಸ್ಟ್​ 4ರಂದು ವಿಚಾರಣೆ ನಡೆಸುದಾಗಿ ಸುಪ್ರೀಂ ಹೇಳಿದೆ. ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ತನಗೆ ವಿಧಿಸಲಾಗಿದ್ದ ಶಿಕ್ಷೆಗೆ ತಡೆ ನೀಡಲು ಗುಜರಾತ್‌ ಹೈಕೋರ್ಟ್‌ ನಿರಾಕರಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿಗಳಿಗೆ ಸರ್ವೋಚ್ಚ ನ್ಯಾಯಾಲಯ ಈಗ ನೋಟಿಸ್‌ ಜಾರಿ ಮಾಡಿದೆ. ಆಗಸ್ಟ್ 4ರಂದು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಪಿಕೆ ಮಿಶ್ರಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಅರ್ಜಿಯ ವಿಚಾರಣೆ ನಡೆಸಲಿದೆ.