ರಾಜ್ಯದ ಉದ್ದಗಲಕ್ಕೂ ಕುಸುಮ ಯೋಜನೆ

Advertisement

ತುಮಕೂರು: ಪಾವಗಡ ತಾಲೂಕಿನ ತಿರುಮಣಿಯ ವಿಶ್ವದ ಅತಿದೊಡ್ಡ ಸೋಲಾರ್ ಪಾರ್ಕ್‌ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರೊಂದಿಗೆ ಭೇಟಿ ನೀಡಿದರು, ಈ ವೇಳೆ ವಿದ್ಯುತ್‌ ಸ್ಥಾವರ ಕುರಿತ ವಿಡಿಯೋ ವೀಕ್ಷಿಸಿದ ಅವರು. ಸದ್ಯ ಇಲ್ಲಿ 2400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಈ ವಿದ್ಯುತ್‌ ಸ್ಥಾವರದ ಮೂಲಕ ನವೀಕರಿಸಬಹುದಾದ ಇಂಧನ ಮತ್ತು ಸುಸ್ಥಿರ ಅಭಿವೃದ್ಧಿಗೆ ಕರ್ನಾಟಕದ ಬದ್ಧತೆಗೆ ಸಾಕ್ಷಿಯಾಗಿದೆ. ಅಲ್ಲದೇ ಶುದ್ಧ- ಹಸಿರು ಇಂಧನ ಮೂಲಗಳನ್ನು ಬಳಸಿಕೊಳ್ಳುವಲ್ಲಿ ನಮ್ಮ ನಾಯಕತ್ವಕ್ಕೆ ಸಾಕ್ಷಿಯಾಗಿದೆ. ಪಾವಗಡ ತಾಲೂಕಿನ ತಿರುಮಣಿಯ ಸೋಲಾರ್ ಪಾರ್ಕ್ 10 ಸಾವಿರ ಎಕರೆಗೆ ವಿಸ್ತರಿಸಲು ನಿರ್ಧಾರ ಮಾಡಿದ್ದೇವೆ. ರೈತರು ಮುಂದೆ ಬಂದರೆ ವಿಸ್ತರಣೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸೋಲಾರ್​ಪಾರ್ಕ್​ ಬಳಿ ಮಾತನಾಡಿದ ಅವರು, ಸೋಲಾರ್ ಪಾರ್ಕ್​ 10 ಸಾವಿರ ಎಕರೆಗೆ ವಿಸ್ತರಿಸಲು ನಿರ್ಧಾರ ಮಾಡಿರುವುದಾಗಿ ತಿಳಿಸಿದರು.


ನಮ್ಮ ಸೋಲಾರ್ ಪಾರ್ಕ್​ ವಿಶ್ವದಲ್ಲೇ ನಂಬರ್ 1 ಇತ್ತು, ಈಗ ರಾಜಸ್ಥಾನದ ನಡುವೆ ಪೈಪೋಟಿಯಿದೆ. 10 ಸಾವಿರ ಎಕರೆ ವಿಸ್ತರಣೆ ಮಾಡಲು ನಿರ್ಧಾರ ಮಾಡಿದ್ದೇವೆ. ಹಿಂದಿನ ನಿಯಮದಂತೆ ರೈತರು ಮುಂದೆ ಬಂದರೆ ಸೋಲಾರ್ ಪಾರ್ಕ್ ವಿಸ್ತರಣೆ ಮಾಡುತ್ತೇವೆ. ರಾಜ್ಯದ ಉದ್ದಗಲಕ್ಕೂ ಕುಸುಮ ಯೋಜನೆ ಮಾಡುತ್ತಿದ್ದೇವೆ. ರೈತರ ಪಂಪ್ ಸೆಟ್‌ಗೆ ಅವರೇ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳಲು ಯೋಜನೆ ರೂಪಿಸಿದ್ದೇವೆ ಹವಾಮಾನ ಬದಲಾವಣೆಯ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಮತ್ತು ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುವ ಜತೆಗೆ, ಮುಂದಿನ ಪೀಳಿಗೆಗೆ ಸುಸ್ಥಿರ ಭವಿಷ್ಯವನ್ನು ಖಚಿತಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.