ರಾಜ್ಯದ ನಾಲ್ಕು ದಿಕ್ಕುಗಳಿಂದ ಬಿಜೆಪಿ ರಥಯಾತ್ರೆಗೆ ತಯಾರಿ: ಬೊಮ್ಮಾಯಿ

Advertisement

ಬೆಂಗಳೂರು: ರಾಜ್ಯದ ನಾಲ್ಕು ದಿಕ್ಕುಗಳಿಂದ ರಥಯಾತ್ರೆಯನ್ನು ಫೆಬ್ರವರಿ ಅಂತ್ಯದಲ್ಲಿ ಆರಂಭಿಸಲು ರೂಪರೇಷೆ ಸಿದ್ಧತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಪಕ್ಷದ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಲ್ಲೇಶ್ವರಂನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ಸಭೆ ನಡೆದಿದೆ. ಬರುವ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮಗಳು, ಅಧಿವೇಶನದ ಜೊತೆಜೊತೆಗೆ ಪಕ್ಷದ ಸಂಘಟನೆ, ಫೆಬ್ರವರಿ ಅಂತ್ಯದವರೆಗೆ ಜನ ಸಂಕಲ್ಪ ಯಾತ್ರೆ ಮುಂದುವರೆಸುವುದು. ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪ್ರಣಾಳಿಕೆ ಸಿದ್ಧಪಡಿಸುವುದು. ರಾಷ್ಟ್ರೀಯ ನಾಯಕರ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಚರ್ಚಿಸಲಾಗಿದೆ ಎಂದರು.