ರಾಮೇಶ್ವರಂ ಕೆಫೆ ಸ್ಫೋಟ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ

Advertisement

ಬೆಂಗಳೂರ: ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಗಾಯಾಳುಗಳಿರುವ ಬ್ರೂಕ್​ ಫೀಲ್ಡ್​ ಆಸ್ಪತ್ರೆ ಹಾಗೂ ವೈದೇಹಿ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ರಾಮೇಶ್ವರಂ ಕೆಫೆಯ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಮಾಡಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ ವೈದ್ಯರೊಂದಿಗೆ ಮಾತನಾಡಿ ಗಾಯಾಳುಗಳ ಚಿಕಿತ್ಸೆಯ ಮಾಹಿತಿ ಪಡೆದುಕೊಂಡರು.

ರಾಮೇಶ್ವರಂ ಕೆಫೆಗೆ ಭೇಟಿ: ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ಬಾಂಬ್ ಸ್ಫೋಟಗೊಂಡ ರಾಮೇಶ್ವರಂ ಕೆಫೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಸ್ಫೋಟ ಸಂಭವಿಸಿದ ಸ್ಥಳ ಪರಿಶೀಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಂಬ್ ಸ್ಪೋಟ ಸಂಭವಿಸಿದ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಘಟನಾ ಸ್ಥಳದ ಪರಿಶೀಲನೆ ನಡೆಸಿ, ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.