ರಾಹುಲ್ ಗಾಂಧಿ ನಿವಾಸಕ್ಕೆ ಪೊಲೀಸರು

Advertisement

‘ಭಾರತ್ ಜೋಡೋ’ ಪಾದಯಾತ್ರೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶ್ರೀನಗರದಲ್ಲಿ ಮಾತನಾಡಿದ್ದು ‘ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಈ ಬಗ್ಗೆ ಹುಡುಗಿಯೊಬ್ಬಳು ತಮ್ಮ ಬಳಿ ಅಳಲು ತೋಡಿಕೊಂಡಿದ್ದರು’ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಂಬಂಧ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ವತಿಯಿಂದ ನಾಯಕ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ‘ಭಾರತ್ ಜೋಡೋ’ ಪಾದಯಾತ್ರೆಯಲ್ಲಿ ಲೈಂಗಿಕ ದೌರ್ಜನ್ಯ ಕುರಿತು ಹೇಳಿಕೆಯೊಂದು ಹೊರ ಬಿದ್ದಿತ್ತು. ಇದರಿಂದಾಗಿ ಪ್ರಕರಣದ ತನಿಖೆ ಕುರಿತು ದೆಹಲಿ ಪೊಲೀಸರು ಭಾನುವಾರ ರಾಹುಲ್ ಗಾಂಧಿ ಅವರು ನಿವಾಸಕ್ಕೆ ತೆರಳಿದ್ದಾರೆ. ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಅವರು ಹಲವು ಅತ್ಯಾಚಾರ ಸಂತ್ರಸ್ತ ಮಹಿಳೆಯರನ್ನು ಭೇಟಿ ಆಗಿದ್ದಾಗಿ ಹೇಳಿದ್ದರು. ಇದೀಗ ಆ ಮಹಿಳೆಯರ ಬಗ್ಗೆ ಮಾಹಿತಿ ಕೊಡಿ ಎಂದು ಕೇಳಲು ಪೊಲೀಸರ ತಂಡ ರಾಹುಲ್ ಗಾಂಧಿ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ನೋಟಿಸ್ ಕೂಡಾ ನೀಡಿದೆ.