ರೈತರ ಕಣ್ಣಲ್ಲಿ ರಕ್ತ ಕಣ್ಣೀರು

Advertisement

ಬೆಂಗಳೂರು: ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್ ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಬೆಳೆನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ.., ಆದರೆ; ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್‌ ಸರಕಾರ ಕೈಕಟ್ಟಿ ಕೂತಿದೆ.
•ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್ ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ. ಮೊದಲೇ ತೀವ್ರ ಬರ, ಬೆಳೆನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಇದು ಎಂದರೆ ತಪ್ಪಲ್ಲ.
•ರಾಜ್ಯ ಸರಕಾರ ಕೂಡಲೇ ಸಾಲ ನೀಡಿರುವ ಎಲ್ಲಾ ಬ್ಯಾಂಕ್ ಗಳ ಮುಖ್ಯಸ್ಥರ ಸಭೆ ಕರೆದು, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಬೇಕು. ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು ಎಂದು ತಾಕೀತು ಮಾಡಬೇಕು ಎನ್ನುವುದು ನನ್ನ ಆಗ್ರಹ ಎಂದಿದ್ದಾರೆ.