ರೈತ ಸಂಪರ್ಕ ಕೇಂದ್ರದ ಬೀಗ ಮುರಿದು ಕಳ್ಳತನ

Advertisement

ಬಾಗಲಕೋಟೆ(ಕುಳಗೇರಿ ಕ್ರಾಸ್): ಗ್ರಾಮದ ಎಪಿಎಂಸಿ ಆವರಣದಲ್ಲಿರುವ ರೈತ ಸಂಪರ್ಕ ಕೇಂದ್ರದ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರೈತ ಸಂಪರ್ಕ ಕೇಂದ್ರದ ಮುಖ್ಯದ್ವಾರದ ಎರಡು ಬೀಗ ಮುರಿದು ಒಳ ನುಗ್ಗಿದ ಕಳ್ಳರು ಕೋಣೆಯಲ್ಲಿನ ೧೨.೦೦೦ ರೂ ನಗದು ದೋಚಿ ಪರಾರಿಯಾಗಿದ್ದಾರೆ ಎಂದು ರೈತ ಸಂಪರ್ಕ ಸಿಬ್ಬಂದಿ ತಿಳಿಸಿದರು.
ರೈತ ಸಂಪರ್ಕ ಕೇಂದ್ರದ ಸಿಬ್ಬಂದಿ ಚುನಾವಣೆ ಕರ್ತವ್ಯದಲ್ಲಿ ತೊಡಗಿದ್ದರಿಂದ ಕಳ್ಳರು ಕೈ ಚಳಕ ತೋರಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದರು.
ಗ್ರಾಮದ ಹೊರವಲಯದಲ್ಲಿ ಮದ್ಯವ್ಯಸನಿಗಳ ಹಾವಳಿ ಹೆಚ್ಚಿದೆ. ಸಿಸಿ ಕ್ಯಾಮರಾ ಅಳವಡಿಸುವಂತೆ ಮೇಲಧಿಕಾರಿಗಳಿಗೆ ಗಮನಕ್ಕೆ ತರಲಾಗಿದೆ. ಶೀಘ್ರದಲ್ಲೆ ಸಿಸಿ ಕ್ಯಾಮೆರಾ ಅಳವಡಿಸಲಾಗುವುದು ಎಂದು ಕೃಷಿ ಅಧಿಕಾರಿ ಬಸವರಾಜ ಬುದ್ನಿ ತಿಳಿಸಿದರು.