ಲಿಫ್ಟ್ ಕುಸಿತ: ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ ಜೋಶಿ

Advertisement

ಬೆಂಗಳೂರು: ರಾಜಸ್ಥಾನದ ನೀಮ್ ಕಾ ಥಾನಾ ಜಿಲ್ಲೆಯ ತಾಮ್ರದ ಗಣಿಯೊಂದರಲ್ಲಿ ಲಿಫ್ಟ್ ಕುಸಿದು 14 ಜನರು ಸಿಕ್ಕಿಬಿದ್ದಿದ್ದಾರೆ. ಈ ಕುರಿತಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ರಾಜಸ್ಥಾನದ ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನ ಕೋಲಿಹಾನ್ ಗಣಿಯಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯ ಮುಂದುವರೆದಿದೆ. ರಾಜಸ್ಥಾನ ಮುಖ್ಯಮಂತ್ರಿಗಳಾದ ಭಜನಲಾಲ ಶರ್ಮಾ ಅವರು, ಸ್ಥಳೀಯ ಆಡಳಿತದ ಸಂಪೂರ್ಣ ಬೆಂಬಲದೊಂದಿಗೆ ಎಲ್ಲಾ ಏಜೆನ್ಸಿಗಳು ಉತ್ತಮವಾಗಿ ಸಂಘಟಿತ ಪ್ರಯತ್ನಗಳನ್ನು ನಡೆಸುತ್ತಿವೆ ಎಂದು ಭರವಸೆ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಬೇಕಾಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವಂತೆ ಗಣಿ ಸಚಿವಾಲಯಕ್ಕೆ ನಿರ್ದೇಶನ ನೀಡಲಾಗಿದೆ. ಈ ಅವಘಡದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ರಾಜಸ್ಥಾನದ ಜುಂಜುನು ಜಿಲ್ಲೆಯ ಕೋಲಿಹಾನ್ ಗಣಿಯಲ್ಲಿ ನಿನ್ನೆ ತಡರಾತ್ರಿ ಲಿಫ್ಟ್ ಕುಸಿದು ಬಿದ್ದ ಪರಿಣಾಮ ಹಿರಿಯ ವಿಜಿಲೆನ್ಸ್ ಅಧಿಕಾರಿಗಳು ಸೇರಿದಂತೆ 14 ಮಂದಿ ಸಿಲುಕಿದ್ದರು.