ಲೋಕಾಯುಕ್ತ ದಾಳಿ: ಇಂಜಿನಿಯರ್ ಬಲೆಗೆ

Advertisement

ಮಂಗಳೂರು: ಜಿಲ್ಲಾ ಪಂಚಾಯತ್ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿದ್ದು, ಜಿಲ್ಲಾ ಪಂಚಾಯತ್‌ನ ಟೆಕ್ನಿಕಲ್ ಅಸಿಸ್ಟೆಂಟ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 8 ಸಾವಿರ ರೂಪಾಯಿ ಲಂಚ ಸ್ವೀಕರಿಸುತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಟೆಕ್ನಿಕಲ್ ಅಸಿಸ್ಟೆಂಟ್ ಇಂಜಿನಿಯರ್ ರೂಪಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಂಟ್ರಾಕ್ಟರ್ ಬಿಲ್ ಪಾಸ್ ಮಾಡಲು ಲಂಚದ ಬೇಡಿಕೆ ಇಟ್ಟಿದ್ದ ರೂಪಾ ಲಂಚ ಸ್ವೀಕರಿಸುವ ಸಂದರ್ಭ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ ಪಿ ಸೈಮನ್ ಮತ್ತು ಡಿ ವೈ ಎಸ್ ಪಿ ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆದಿದೆ.