ಹುಬ್ಬಳ್ಳಿ: ಧಾರವಾಡ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಐದನೇ ಬಾರಿಗೆ ಗೆಲುವು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
ಇನ್ನು ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಶಕ್ತ ಭಾರತವನ್ನು ನಿರ್ಮಾಣ ಮಾಡುವುದಕ್ಕೆ ಧಾರವಾಡದಿಂದ ಮತ್ತೊಮ್ಮೆ ನನ್ನನ್ನು ಆಯ್ಕೆ ಮಾಡಿ ಆಶೀರ್ವದಿಸಿರುವ ಕ್ಷೇತ್ರದ ಎಲ್ಲ ನನ್ನ ಪ್ರೀತಿಯ ಮತದಾರರಿಗೆ ನನ್ನ ಅನಂತಾನಂತ ಧನ್ಯವಾದಗಳು. ಹಾಗೂ ಈ ವಿಜಯದ ರೂವಾರಿಗಳಾದ ಹೆಮ್ಮೆಯ ಕಾರ್ಯಕರ್ತರಿಗೆ, ಪಕ್ಷದ ಹಿರಿಯರಿಗೆ ಮುಖಂಡರಿಗೆ ನನ್ನ ಹೃತ್ಪೂರ್ವಕ ವಂದನೆಗಳು ಎಂದಿದ್ದಾರೆ.