ವಿಜಯಪುರ: ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Advertisement

ವಿಜಯಪುರ: ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣ ಮಾಡುತ್ತಿದ್ದ ಕಾರು ವಿಜಯಪುರದ ಜುಮನಾಳ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ.
ವಿಜಯಪುರ‌-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಘಟನೆ ನಡೆದಿದೆ. ಕೇಂದ್ರ ಸಚಿವೆ ಪ್ರಯಾಣ ಮಾಡುತ್ತಿದ್ದ ಕಾರು ಹಾಗೂ ಕ್ಯಾಂಟರ್ ಮಧ್ಯೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕೇಂದ್ರ ಸಚಿವರಿಗೆ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಕೇಂದ್ರ‌‌ ಸಚಿವೆ ಸಾಧ್ವಿ ನಿರಂಜನಾ‌ ಜ್ಯೋತಿ ಹಾಗೂ ಕಾರು ಚಾಲಕನನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಯಾರಿಗೂ ಗಂಭೀರ ಗಾಯವಾಗಿಲ್ಲ ಎಂದು ಪೊಲೀಸರ ಮಾಹಿತಿ ನೀಡಿದ್ದಾರೆ.
ನಗರದಲ್ಲಿ ಗುರುವಾರ (ಮಾ.16) ನಡೆದ ಬಿಜೆಪಿ ಮಹಿಳಾ ಸಮಾವೇಶ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಸಾಧ್ವಿ ಅವರು ಭಾಗಿಯಾಗಿದ್ದರು. ಕಾರ್ಯಕ್ರಮಗಳ ಬಳಿಕ ಬಾಗಲಕೋಟೆಯತ್ತ ಪ್ರಯಾಣ ಬೆಳೆಸಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.