ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕ ಪೊಲೀಸರ ವಶಕ್ಕೆ

ಶಿಕ್ಕಕ
Advertisement

ರಾಯಚೂರು: 10ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಸರ್ಕಾರಿ ಸ್ವಾಮ್ಯದ ಶಾಲೆಯೊಂದರ ಮುಖ್ಯೋಪಾಧ್ಯಾಯನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಶಕ್ತಿ​ನ​ಗ​ರದ ಕೆಪಿಸಿಎಲ್‌ ಡಿಎವಿ ಶಾಲೆಯ ಮುಖ್ಯೋಪಾಧ್ಯಾಯ ವಿ.ಕೆ.ಅಂಗಡಿ ಈ ಪ್ರಕರಣದ ಆರೋಪಿಯಾಗಿದ್ದು, ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿದಿನ ಮೊಬೈಲ್ ಕರೆ ಮಾಡಿ ಹಾಗೂ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಶಕ್ತಿನಗರ ಪೊಲೀಸರು ರಾಯಚೂರು ಮಹಿಳಾ ಪೊಲೀಸ್ ಠಾಣೆಗೆ ಆರೋಪಿಯನ್ನು ಒಪ್ಪಿಸಿದ್ದಾರೆ. ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ 20/2023 ಕಲಂ 354 (ಎ), (ಸಿ) ಐಪಿಸಿ ಮತ್ತು 8, 12, ಪೋಕ್ಸೋ ಕಾಯ್ದೆ ಹಾಗೂ 3(1)(ಆರ್​)(ಯು)(ವಿ) ಎಸಿ/ಎಸ್ ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ